ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಸಾಂವಿಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರಿತು ಅತ್ಯಂತ ಕೀಳುಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ ರಾಜ್ಯದ ಒಬ್ಬ ಹಿರಿಯ ರಾಜಕಾರಣಿ. ಅಂಥವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕೆ ವಿನಃ ಇಂತಹ ಕ್ಷುಲ್ಲಕ ಹೇಳಿಕೆ ನೀಡಬಾರದೆಂದು ಆಕ್ಷೇಪಿಸಿದ್ದಾರೆ.
ಕ್ಷಮೇ ಕೇಳಬೇಕು, ಇಲ್ಲದಿದ್ದರೆ ನಮ್ಮ ಕಾರ್ಯಕರ್ತರು ಕೂಡ ಅದೇ ಭಾಷೆಯಲ್ಲೇ ಉತ್ತರ ಕೊಡುತ್ತಾರೆ ಎಂದರು.ಮಾಜಿ ಸಿಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಅವರು ನರೇಂದ್ರ ಮೋದಿ ಅವರ ಮುಂದೆ ನಾಯಿಮರಿಯಂತೆ ಇರುತ್ತಾರೆ. ರಾಜ್ಯಕ್ಕೆ ಒಂದಿಷ್ಟು ಅನುದಾನವನ್ನು ತರುವ ಸಾಮರ್ಥ್ಯವೂ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.