ಕಲಬುರಗಿ :- 2024 ಲೋಕಸಭಾ ಚುನಾವಣೆಯಲ್ಲಿ ಯುವ ಅಭ್ಯರ್ಥಿಗಳಿಗೆ ಬಿಜೆಪಿಯ ಹೈಕಮಾಂಡ್ ಅವಕಾಶ ನೀಡಬೇಕು ಎಂದು ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ ಚವ್ಹಾಣ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಲಬುರಗಿ ಲೋಕಸಭಾ ಮೀಸಲು ಮತಕ್ಷೇತ್ರ ಇರುವುದರಿಂದ ಯುವ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಎಂದು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಇದನ್ನೂ ಓದಿ : ಮಾಜಿ ಪ್ರಧಾನಿ ದೇವೇಗೌಡ ದಂಪತಿಗೆ ‘ಹುಟ್ಟೂರ ಸನ್ಮಾನ’
ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಯೊಂದೂ ಚುನಾವಣೆಯಲ್ಲಿ ಸಂಘಟನೆ ಹೋರಾಟ ಮಾಡಲು ಮುಂಚೂಣಿಯಲ್ಲಿರುತ್ತಾರೆ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ ಯುವ ಕಾರ್ಯಕರ್ತರನ್ನ ಗುರುತಿಸಿ ಎಂದು ವಿನಂತಿಸಿದರು.
2024ರ ಚುನಾವಣೆ ಎದುರಿಸಲು ಸೂಕ್ತವಾದ ಅಭ್ಯರ್ಥಿಗಳನ್ನು ಬಿಜೆಪಿಯ ಹಿರಿಯ ನಾಯಕರು ಹಾಗೂ ಕೇಂದ್ರದ ಹಿರಿಯ ನಾಯಕರು ಯುವ ಅಭ್ಯಾರ್ಥಿಗಳನ್ನು ಪರಿಗಣಿಸಿ ಅವಕಾಶ ನೀಡಬೇಕು… ಯುವ ಅಭ್ಯರ್ಥಿಗಳು ಕೆಲಸ ಮಾಡಲು ತವಕದಲ್ಲಿರುತ್ತಾರೆ, ವರಿಷ್ಟರು ಯುವ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟರೆ ದೇಶ -ಪಕ್ಷ ಕಟ್ಟುವಲ್ಲಿ ಅವರು ಸಾಥ್ ಕೊಡಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.