ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ಹಿನ್ನಲೆ ಮದ್ಯದ ಅಂಗಡಿಗಳಿಗೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರಿಗೆ ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಅಮೀತ್ ಷಾ ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಆದೇಶದ ಪ್ರಕಾರ, ಇಂದು ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ.ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಇನ್ನೂ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ವರ್ಷಾಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಫೆ.11ರಂದು ಪುತ್ತೂರಿಗೆ ಆಗಮಿಸಿ, ಮಧ್ಯಾಹ್ನ 2.30ಕ್ಕೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತವ ವರ್ಷಾಚರಣೆಗೆ ಚಾಲನೆ ನೀಡುವರು, ಅದೇ ಸಂದರ್ಭದಲ್ಲಿ ವಿವಿಧ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ, ಈ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನೆರವೇರಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದ್ದಾರೆ.