Monday, March 20, 2023
spot_img
- Advertisement -spot_img

ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಼

ರಾಮನಗರ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಬಗ್ಗೆ ಮಾಧ್ಯಮದವರಿಗೆ ಎಚ್ ಡಿಕೆ ಪ್ರತಿಕ್ರಿಯಿಸಿದ್ದಾರೆ.ನಿಖಿಲ್‌ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮಕೊಟ್ಟಜನರೇ ತೀರ್ಮಾನಿಸುತ್ತಾರೆ. ರಾಮನಗರದಿಂದ ನಾನು ಸ್ಪರ್ಧೆ ಮಾಡಬೇಕೇ, ಅಥವಾ ಅನಿತಾ ಸ್ಪರ್ಧಿಸಬೇಕೇ ಅಥವಾ ನಿಖಿಲ್‌ ಸ್ಪರ್ಧಿಸಬೇಕೇ ಎಂಬುದನ್ನೂ ಜನರೇ ನಿರ್ಧರಿಸುತ್ತಾರೆ.

ನಿಖಿಲ್‌ ಹೆಸರು ಘೋಷಿಸುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ಅವರನ್ನು ಹೇಗೆ ದಡ ಸೇರಿಸಬೇಕೆಂಬ ಚಿಂತೆ ನನಗಿಲ್ಲ ಎಂದರು. ಕಲ್ಯಾಣೋತ್ಸವ ಮುಗಿದ ನಂತರ ದೇವರ ಅನುಗ್ರಹ ಪಡೆದು 97 ರಿಂದ 116 ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಮನಗರದಲ್ಲಿ ಶುಕ್ರವಾರ ಸಂಜೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮ ಮುಗಿದ ಬಳಿಕ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಂಚರತ್ನ ರಥಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೆಡಿಎಸ್‌ಗೆ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ವಾತಾವರಣ ಇದೆ ಎಂದರು.

Related Articles

- Advertisement -

Latest Articles