ಬೆಂಗಳೂರು: ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಎಡಿಜಿಪಿ ಆರ್.ಹಿತೇಂದ್ರ ಅವರನ್ನು ರಾಜ್ಯದ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಐಜಿಪಿ ಸಂದೀಪ್ ಪಾಟೀಲ್ ಅವರನ್ನು ಸಹಾಯಕ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ಹಾಗೂ ಐಜಿಪಿ ದೇವಜ್ಯೋತಿ ರೇ ಅವರನ್ನು ಸಹಾಯಕ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ: ಜನರು ಅವಕಾಶ ಕೊಟ್ಟಿದ್ದಾರೆ ಸರಿಯಾಗಿ ಸರ್ಕಾರ ನಡೆಸಿ; ಕಾಂಗ್ರೆಸ್ ಗೆ ಕೇಂದ್ರ ಸಚಿವ ಜೋಶಿ ಸಲಹೆ
ಮುಂಬರುವ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಂಭವವಿದ್ದು, ಈ ಮೊದಲು ರಾಜ್ಯ ಸರ್ಕಾರ ಸಿದ್ಧತೆಯಲ್ಲಿ ತೊಡಗಿದೆ. ಇದರ ಅಂಗವಾಗಿ ನೋಡಲ್ ಅಧಿಕಾರಿಗಳ ನೇಮಿಸಿ ಆದೇಶ ಹೊರಡಿಸಿದೆ.


ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.