ಬೆಂಗಳೂರು: ಮಾಡಾಳ್ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 5 ಆರೋಪಿಗಳನ್ನು ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಲು ಆದೇಶಿಸಲಾಗಿದೆ.
ಮಾರ್ಚ್ 16ರ ವರೆಗೆ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಪೊಲೀಸರು ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ನ್ಯಾಯಮೂರ್ತಿ ಕೆ. ನಟರಾಜನ್ ಏಕಸದಸ್ಯತ್ವದ ಪೀಠ, 5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಆದೇಶಿಸಿತ್ತು. ಅಲ್ಲದೇ ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. ಅದರಂತೆ ಸಾರ್ವಜನಿಕರ ಪ್ರದೇಶದಲ್ಲಿ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕರನ್ನು ಬೆಂಬಲಿಗರು ಮೆರವಣಿಗೆ ನಡೆಸಲಾಗಿತ್ತಲ್ಲದೆ, ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದ್ದರು.
ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು ಮುಂಗಡವಾಗಿ 40 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಪ್ರಶಾಂತ್ನನ್ನು ಲಾಕ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿ ಕಳೆದ ಕೆಲ ದಿನಗಳಿಂದ ಮಾಡಾಳ್ ವಿರೂಪಾಕ್ಷಪ್ಪ ತಲೆಮರಿಸಿಕೊಂಡಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.