ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಪತ್ನಿ ಸುಧಾ ಶಿವರಾಮೇಗೌಡ ಪರ ನಾಗಮಂಗಲದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಇತ್ತಿಚೆಗಷ್ಟೇ ಬಿಜೆಪಿಗೆ ಸೇರಿರುವ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ನಾಗಮಂಗಲದಿಂದ ಸ್ಪರ್ಧಿಸಲು ಟಿಕೆಟ್ ಪಡೆದಿರುವ ಸುಧಾ ಶಿವರಾಮೇಗೌಡ ಪರ ಮತ ಯಾಚಿಸಿದರು.
ಈ ಕುರಿತು ಮಾತನಾಡಿ, ಸುಮಾರು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಆದರೆ ಯಾವುದೇ ಅಧಿಕಾರ ಅನುಭವಿಸಿರಲಿಲ್ಲ, ಈ ಭಾಗದ ಜನರು ನನ್ನೋಂದಿಗಿದ್ದಾರೆ , ನಾನೇನಾದ್ರೂ ತಪ್ಪು ಮಾಡಿದ್ರೆ ಕ್ಷಮಿಸಿ, ನನ್ನ ಪತ್ನಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಕಳೆದ ಕೆಲವು ದಿನಗಳ ಹಿಂದೆ ಎಲ್ ಶಿವರಾಮೇಗೌಡ ಹಾಗೂ ಅವರ ಪುತ್ರ ಚೇತನ್ ಗೌಡ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿಗೆ ಸೇರಿದ್ದರು. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಬೇರೆ ಪಕ್ಷಗಳ ಬಗ್ಗೆ ನಾನು ಮಾತಾಡಲ್ಲ, ಮೋದಿಯವರು ಎಲ್ಲ ಕಡೆ ಅಭಿವೃದ್ಧಿ ಮಾಡುತ್ತಿದ್ದಾರೆ ಹೀಗಾಗಿ ಬಿಜೆಪಿಗೆ ಸೇರಿದ್ದೇನೆ ಎಂದಿದ್ದರು. ನಾನು ಮಂಡ್ಯದಲ್ಲಿ ಬಿಜೆಪಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಶಪಥ ಮಾಡಿದ್ದಾರೆ. ಎಲ್ ಆರ್ ಶಿವರಾಮೇಗೌಡ ಸ್ವತ: ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕುಟುಂಬದ ಸದಸ್ಯರ ಮನವಿ ಮೇರೆಗೆ ಸುಧಾ ಶಿವರಾಮೇಗೌಡರ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ ,
ಪತ್ನಿ ಸ್ಪರ್ಧೇಗೆ ಸಂತಸ ವ್ಯಕ್ತಪಡಿಸಿರುವ ಎಲ್ ಶಿವರಾಮೇಗೌಡ , ಪತ್ನಿ ಪರ ಪ್ರಚಾರ ಆರಂಭಿಸಿದ್ದಾರೆ. ರಾಜಕೀಯ ಹಿನ್ನೆಲೆಯಿಂದ ಬಂದಿರುವ ಸುಧಾ ಶಿವರಾಮೇಗೌಡ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ರಾಮಕೃಷ್ಣಪ್ಪ ಪುತ್ರಿಯಾಗಿದ್ದಾರೆ.