ಮೈಸೂರು: ರಾಜ್ಯ ಸರ್ಕಾರ ಶೇ. 40 ಕಮಿಷನ್ ಹಣಕ್ಕಾಗಿ, ರಾಜ್ಯವನ್ನು ಹಾಳು ಮಾಡುತ್ತಿದೆ. ಮೀಸಲಾತಿ ಹೆಚ್ಚಳ ಹೆಸರಿನಲ್ಲಿ ಸಮುದಾಯಗಳು ಕಿತ್ತಾಡುವಂತೆ ಮಾಡುತ್ತಿದ್ದಾರೆ ಎಂದು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ‘ಬಿಜೆಪಿಯ ನಿಜಕನಸುಗಳು’ ಎಂಬ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದರು. ಪಂಚಮಸಾಲಿ ಲಿಂಗಾಯತ, ಒಗ್ಗಲಿಗ ಎಸ್ಸಿ ಎಸ್ಟಿ ಇರಬಹುದು. ಎಲ್ಲರ ವಿಷಯದಲ್ಲೂ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡುತ್ತಿದ್ದಾರೆ. ಎಸ್.ಸಿ, ಎಸ್ಟಿಗಳ ಮೇಲಿನ ದೌರ್ಜನ್ಯ ಶೇ. 26ಕ್ಕೆ ಏರಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ.
ಬಿಜೆಪಿ ವಿರುದ್ಧ ಮತ ಹಾಕುವವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು, ಇವೇ ಬಿಜೆಪಿ ನಿಜಕನಸುಗಳು ಎಂದು ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ಬಿಜೆಪಿಯಲ್ಲಿ ಪಿಂಪ್ಗಳು ಹೆಚ್ಚಾಗುತ್ತಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ. ಬಿಜೆಪಿಯಲ್ಲಿರುವ ಸಚಿವರು, ಮಂತ್ರಿಗಳೇ ಹೇಳಿಕೊಳ್ಳುತ್ತಿದ್ದಾರೆ.
ಯಡಿಯೂರಪ್ಪ ಹಾಗೂ ಅವರ ಕುಟುಂಬದವರನ್ನು ಸಂಪೂರ್ಣವಾಗಿ ಬದಿಗೆ ತಳ್ಳಿ ಹೊಸದಾಗಿ ಬಿಜೆಪಿ ಪಕ್ಷವನ್ನು ಕಟ್ಟುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ಅಪ್ಪಿತಪ್ಪಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮುಸ್ಲಿಂ ಸಮುದಾಯದಕ್ಕೆ ಅಪಾಯ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.