ಚಿಕ್ಕಮಗಳೂರು: ಮೂಡಿಗೆರೆ ಎಸ್ಸಿ ಮೀಸಲು ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದೆ.ಹಾಲಿ ಶಾಸಕರನ್ನು ಕೈ ಬಿಟ್ಟು ದೀಪಕ್ ದೊಡ್ಡಯ್ಯರಿಗೆ ಪಕ್ಷ ಟಿಕೆಟ್ ನೀಡಿದೆ.
ಹಾಲಿ ಶಾಸಕ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ದು, ಶಾಸಕ ಮತ್ತು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ದೀಪಕ್ ದೊಡ್ಡಯ್ಯರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಇದರಿಂದ ಎಂ ಪಿ ಕುಮಾರಸ್ವಾಮಿ ಅಸಮಾಧಾನಗೊಂಡು, ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಪಕ್ಷದ ಬೆಳವಣಿಗೆ ಕಂಡು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.
ಹಾಲಿ ಶಾಸಕ ಕುಮಾರಸ್ವಾಮಿ ಸೇರಿ ದೀಪಕ್ ದೊಡ್ಡಯ್ಯ, ವಿಜಯ ಕುಮಾರ್ ಟಿಕೆಟ್ ಗಾಗಿ ರೇಸ್‌ನಲ್ಲಿದ್ದರು.ಹೈಕಮಾಂಡ್, ಕಾರ್ಯಕರ್ತರ ಬೇಡಿಕೆಯಂತೆ ಹೊಸ ಅಭ್ಯರ್ಥಿಯನ್ನು ಘೋಷಿಸಿದೆ.