ದಾವಣಗೆರೆ : ಭ್ರಷ್ಟಾಚಾರ ಆರೋಪದಿಂದ ನನಗೆ ಯಾವುದೇ ಡ್ಯಾಮೇಜ್ ಆಗಿಲ್ಲ , ಪಕ್ಷ ನನಗೆ ತಾಯಿ ಇದ್ದಂತೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ, ಪಕ್ಷಕ್ಕೆ ಮುಜುಗರ ಆಗೋದಾದ್ರೆ ಯಾವುದೇ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಹೇಳಿದ ತಕ್ಷಣ ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ, 48 ಗಂಟೆಯೊಳಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗ್ತೇನೆ, ಜಾಮೀನು ದೊರೆತ ನಂತರ ನಾನು ಯಾವುದೇ ಮೆರವಣಿಗೆ ಮಾಡಿಲ್ಲ ಎಂದು ಹೇಳಿದ್ದಾರೆ. ಇನ್ನೂ ಇದೇ ವಿಚಾರವಾಗಿ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿಲ್ಲ ಪ್ರಾಥಮಿಕ ತನಿಖಾ ವರದಿ ಬರೋವರೆಗೆ ಉಚ್ಚಾಟನ ಮಾಡಲ್ಲ ಎಂದಿದ್ದಾರೆ. ವರದಿ ಬಂದ ನಂತರ ಪಕ್ಷ ಕ್ರಮ ವಹಿಸುತ್ತದೆ , ಅವರನ್ನು ಉಚ್ಚಾಟನೆ ಮಾಡಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮಾಡಾಳು ಗ್ರಾಮದ ಮನೆ ಬಳಿ ಶಾಸಕ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದರು. ಇಷ್ಟು ದಿನ ನಾಪತ್ತೆಯಾಗಿ, ಇದೀಗ ಜಾಮೀನು ಪಡೆದು ಬಂದ ಮಾಡಾಳು ವಿರೂಪಾಕ್ಷಪ್ಪಗೆ ಕುಟುಂಬಸ್ಥರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದಾರೆ.