Tuesday, March 28, 2023
spot_img
- Advertisement -spot_img

ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಚೆನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಬೆನ್ನಲ್ಲೇ ರಾಜೀನಾಮೆ ಕೊಟ್ಟಿದ್ದಾರೆ.

ಬಿಜೆಪಿಯ ಚೆನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ರನ್ನು ಲಂಚ ಸ್ವೀಕಾರ ಮಾಡ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ, ಮಾತ್ರವಲ್ಲ 8. 12 ಕೋಟಿ ಹಣವನ್ನು ಸೀಜ್ ಮಾಡಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಅವರು ರಾಜೀನಾಮೆ ನೀಡಿದ ಪತ್ರದಲ್ಲಿ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ, ನನ್ನ ಮತ್ತು ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ನನ್ನ ಮೇಲೆ ಆಪಾದನೆ ಇರೋದ್ರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಶಾಂತ್ ಬಿಡಬ್ಲ್ಯುಎಸ್ ಎಸ್ ಬಿಯ ಅಧಿಕಾರಿಯಾಗಿದ್ದಾರೆ. ಕೆಎಸ್‌ಡಿಲ್‌ ಟೆಂಡರ್‌ ಕಾರ್ಯಾದೇಶ ನೀಡಲು 40 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಅವರನ್ನು ಬಂಧಿಸಿದ್ದರು.

ಪ್ರಶಾಂತ್ ಕಚೇರಿಯಲ್ಲಿ ನಡೆಸಿದ ತಪಾಸಣೆಯ ಬೇಳೆ 2 ಕೋಟಿ 2 ಲಕ್ಷ ರೂಪಾಯಿ ಪತ್ತೆ ಯಾಗಿತ್ತು. ಬಳಿಕ ಮನೆಯ ಮೇಲೆ ದಾಳಿಯ ಸಂದರ್ಭದಲ್ಲೂ ಸುಮಾರು 6 ಕೋಟಿ ಅನಧಿಕೃತ ಹಣ ಪತ್ತೆಯಾಗಿತ್ತು.

Related Articles

- Advertisement -

Latest Articles