ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಮಧು ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನಗೆ ಫೋನ್ ಮಾಡಿ ‘ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿ’ ಎಂದು ಕೈ ನಾಯಕರು ಸೂಚನೆ ಕೊಟ್ಟಿದ್ದರು, ಆದರೆ ಬೆಳಿಗ್ಗೆ ಪಟ್ಟಿಯಲ್ಲಿ ನನ್ನ ಹೆಸರು ಇರಲಿಲ್ಲ.ಮಲೆನಾಡಿನಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಕೊಡುಗೆ ಇದೆ. ಒಬಿಸಿ ಸೆಲ್ ಮುಖ್ಯಸ್ಥರಾಗಿ ಕೆಲಸ ಮಾಡಿದ್ದೇನೆ. ಸಮುದಾಯ ಕಾಂಗ್ರೆಸ್ ಕೈ ಹಿಡಿದಿದೆ. ಆದರೂ ಸಚಿವ ಸ್ಥಾನ ನೀಡಲ್ಲ ಎಂದು ಅವರು ಆಪ್ತರ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತ್ರವಲ್ಲದೆ, ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ ಸೇರಿದಂತೆ ಕೆಲ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನೂ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್‌ಗೆ ಸಿಕ್ಕಿರುವ ಜಯ ನಾಡಿನ ಜನತೆಗೆ ಸಿಕ್ಕ ಜಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಚುನಾವಣಾ ಪ್ರಚಾರ ನಡೆಸಿದ ಸರ್ವರಿಗೂ ಧನ್ಯವಾದ. ರಾಜ್ಯದ ಮಹಿಳೆಯರಿಗೆ, ಯುವಕರಿಗೆ ರೈತರಿಗೆ ಧನ್ಯವಾದ, ನಿಮ್ಮ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಕೊಟ್ಟ ಐದು ಗ್ಯಾರಂಟಿಯನ್ನು ಇವತ್ತೇ ಸಚಿವ ಸಂಪುಟದಲ್ಲಿ ಆದೇಶ ಹೊರಡಿಸುತ್ತೇವೆ. ಕೊಟ್ಟ ಭರವಸೆಯನ್ನು ಈಡೇರಿಸಿಯೇ ತೀರುತ್ತೇವೆ ಎಂದಿದ್ದಾರೆ.