ಬೆಂಗಳೂರು : ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ, ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುವ ಕಡೆ ನಮ್ಮ ಗಮನವಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸುವ ಕಡೆ ಮಾತ್ರ ನಮ್ಮ ಚಿತ್ತ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಈವರೆಗೆ ಸಚಿವ ಸ್ಥಾನವನ್ನು ಕೊಡಿ ಎಂದು ಕೇಳಿಯೂ ಇಲ್ಲ. ಅವರು ಕೊಡುವುದಾಗಿ ಹೇಳಿಯೂ ಇಲ್ಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಶ್ರಮದಿಂದ ಸರ್ಕಾರ ಬಂದಿದೆ. ಉತ್ತಮ ಕೆಲಸ ಮಾಡುವ ಕಡೆ ನಮ್ಮ ಗಮನವಿದೆ. ಈ ವಿಚಾರವಾಗಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.