Monday, March 20, 2023
spot_img
- Advertisement -spot_img

ಭಾರತ ಜೋಡೊ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಹೆಚ್ ಡಿ ದೇವೇಗೌಡರಿಗೆ ಆಹ್ವಾನ

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡರಿಗೆ ಭಾರತ ಜೋಡೊ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಕಾಂಗ್ರೆಸ್ ನಾಯಕ, ಸಂಸದ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದ್ದು,ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ. ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ದೇಶಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ.

Related Articles

- Advertisement -

Latest Articles