Wednesday, March 22, 2023
spot_img
- Advertisement -spot_img

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ʻಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇರ ಪೈಪೋಟಿಗೆ ಇಳಿದಿದ್ದರು. ಈ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು.ಕಳೆದ ವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆದಿದ್ದರು. ಈ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 416 ಮತಗಳು ಅಮಾನ್ಯಗೊಂಡಿತ್ತು.ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು.

ನಂತ್ರ, ಇಂದು ಬೆಳಗ್ಗೆ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

Related Articles

- Advertisement -

Latest Articles