Sunday, September 24, 2023
spot_img
- Advertisement -spot_img

ಜಿ-20 ಶೃಂಗಸಭೆ ಔತಣಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ!

ನವದೆಹಲಿ: ಜಿ-20 ಶೃಂಗಸಭೆ ಹಿನ್ನೆಲೆ ರಾಷ್ಟ್ರಪತಿ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ ಆಫ್ ಭಾರತ’ ಎಂದು ಮುದ್ರಣಗೊಂಡ ಬಳಿಕ ಈ ಔತಣಕೂಟ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಆಹ್ವಾನ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಭಾರೀ ಟೀಕೆಗೂ ಕಾರಣವಾಗಿದೆ.

ಕೇಂದ್ರವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹೆಚ್‌.ಡಿ ದೇವೇಗೌಡರಿಗೂ ಆಹ್ವಾನ ನೀಡಿದೆ. ಆರೋಗ್ಯದ ಕಾರಣ ನೀಡಿ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ತಿಳಿಸಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರಿಂದ ಔತಣಕೂಟಕ್ಕೆ ತೆರಳುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಖರ್ಗೆಗೆ ಆಹ್ವಾನ ನೀಡದೆ ಕೇಂದ್ರ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಎಂಎಸ್ ಧೋನಿ : Video ವೈರಲ್

ಇದಕ್ಕೂ ಮೊದಲು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ಮೋದಿ ಭಾಷಣಕ್ಕೆ ಖರ್ಗೆಯವರನ್ನು ಆಹ್ವಾನಿಸಲಾಗಿತ್ತು. ಆದರೆ ಅನಾರೋಗ್ಯ ಕಾರಣ ನೀಡಿ ಖರ್ಗೆ ಈ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಆದರೆ ಇದೀಗ ಜಿ-20 ಸಂಬಂಧ ಆಯೋಜಿಸಿರುವ ಔತಣಕೂಟಕ್ಕೆ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೆಡಿಯು ಮುಖ್ಯಸ್ಥರು ಶನಿವಾರ ಬೆಳಗ್ಗೆ 10.45ಕ್ಕೆ ದೆಹಲಿಗೆ ತೆರಳಲಿದ್ದಾರೆ. ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಔತಣಕೂಟಕ್ಕೆ ದೆಹಲಿಗೆ ತೆರಳುವುದಾಗಿ ಖಚಿತಪಡಿಸಿದ್ದರು.

ಇದನ್ನೂ ಓದಿ: Narendra Modi : 15 ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಪಿಎಂ ಮೋದಿ

ದೆಹಲಿಯಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿರುವ G20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗಿಯಾಗುತ್ತಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles