Monday, March 20, 2023
spot_img
- Advertisement -spot_img

ಆರ್ ಎಸ್ ಎಸ್ , ಬಿಜೆಪಿಯಿಂದಾಗಿ ಪ್ರಜಾಪ್ರಭುತ್ವ, ಸಂವಿಧಾನ ಅಪಾಯದಲ್ಲಿದೆ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮುಂಬೈ : ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಈಗಿನ ಸರ್ಕಾರ ಪ್ರತ್ಯೇಕಿಸುತ್ತಿದೆ, ಇದರ ವಿರುದ್ಧ ಹೋರಾಡಲು ಕಾಂಗ್ರೆಸ್‌ ಗೆ ಜನ ಬೆಂಬಲ ಬೇಕು. ನೀವು ನಮ್ಮನ್ನು ಬೆಂಬಲಿಸಿದರೆ ಅಪಾಯದಲ್ಲಿರುವ ಪ್ರಜಾಪ್ರಭುತ್ವದ ವಿರುದ್ಧ ಹೋರಾಡುತ್ತೇವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ನ 138ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಆರ್ ಎಸ್ ಎಸ್ ಮತ್ತು ಬಿಜೆಪಿಯಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯದಲ್ಲಿದೆ. ಧರ್ಮದ ಆಧಾರದ ಮೇಲೆ ಸಮಾಜ ಇಬ್ಭಾಗ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ 138ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ನಾಶಪಡಿಸುತ್ತಿದ್ದು, ಯುವಕರು, ಮಹಿಳೆಯರು, ಎಲ್ಲ ಸಮಾಜ ಎಚ್ಚೆತ್ತುಕೊಂಡು ಒಗ್ಗೂಡಬೇಕಿದೆ. ಅಪಾಯದಲ್ಲಿರುವ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ಬಿಜೆಪಿ ಸೃಷ್ಟಿಸುತ್ತಿರುವ ದ್ವೇಷದ ವಾತಾವರಣದ ವಿರುದ್ಧ ಹೋರಾಡುವ ಪ್ರಯತ್ನವಾಗಿದೆ. ಕೋವಿಡ್ ಕಾರಣದಿಂದಾಗಿ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ನಮ್ಮ ನಾಯಕ ರಾಹುಲ್ ಗಾಂಧಿಗೆ ಸೂಚನೆಯನ್ನು ಕಳುಹಿಸಲಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

Related Articles

- Advertisement -

Latest Articles