Sunday, March 26, 2023
spot_img
- Advertisement -spot_img

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಲಿಂಗಾಯತ ಮುಖಂಡರು

ಬೆಂಗಳೂರು: ಲಿಂಗಾಯತ ಮುಖಂಡರಾದ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಶೇಕಡಾ 16 ರಷ್ಟು ಲಿಂಗಾಯತ ಮತದಾರರಿದ್ದಾರೆ. ದಕ್ಷಿಣ ಕರ್ನಾಟಕದ ಸುಮಾರು 100 ಕ್ಷೇತ್ರಗಳಲ್ಲಿ ಉತ್ತಮ ಪ್ರಾತಿನಿಧ್ಯಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ, ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಬೆಂಗಳೂರಿನಲ್ಲಿ ಸಭೆ ನಡೆಸಿ, ಟಿಕೆಟ್‌ಗಾಗಿ ಒತ್ತಾಯಿಸಿದ್ದರು.ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ಡಿ ಕೆ ಶಿವಕುಮಾರ್ ಹಾಗೂ ಸ್ಕ್ರೀನಿಂಗ್ ಕಮಿಟಿ ಅಂತಿಮ ಪಟ್ಟಿಯ ಕೆಲಸ ಮಾಡುತ್ತಿದ್ದು, ಲಿಂಗಾಯತ ನಾಯಕರು ಖರ್ಗೆ ಅವರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.

ತಿಪಟೂರು ಮತ್ತು ತುಮಕೂರಿನ ಚಿಕ್ಕನಾಯಕನಹಳ್ಳಿ, ಕೋಲಾರ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಒಂದು ಅಥವಾ ಎರಡು ಸ್ಥಾನಗಳನ್ನು ನೀಡಬೇಕು. ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಚಾಮರಾಜನಗರದ ಗುಂಡ್ಲುಪೇಟೆ, ಮೈಸೂರಿನ ಕೃಷ್ಣರಾಜ ಮತ್ತು ಕೊಡಗಿನ ಮಡಿಕೇರಿ-ಸೋಮವಾರಪೇಟೆಯಲ್ಲೂ ಇದೇ ಮಾದರಿಯನ್ನು ಪರಿಗಣಿಸಬೇಕು ಎಂದು ಸಮುದಾಯ ಹೇಳಿದೆ.

ಅಂದಹಾಗೆ ನಾವು ಸಮಾಜದ ಎಲ್ಲಾ ವರ್ಗಗಳನ್ನು ಗೌರವಿಸುತ್ತೇವೆ ಮತ್ತು ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ. ಅಭ್ಯರ್ಥಿಗಳ ಆಯ್ಕೆಗೆ ಮಾನದಂಡಗಳಿವೆ, ಅದರ ಪ್ರಕಾರ ನಡೆಸಲಾಗುತ್ತದೆ ಎಂದು ಡಿಕೆಶಿವಕುಮಾರ್ ಹೇಳಿದ್ದರು.

Related Articles

- Advertisement -

Latest Articles