ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಜೈ ಭಾರತ ಸಮಾವೇಶದಲ್ಲಿ ಮಾತನಾಡಿ,ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ ,ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ತಿಳಿಸಿದರು.
40 ಪರ್ಸೆಂಟ್ ಸರ್ಕಾರದ ಮೇಲೆ ಜನ ರೊಚ್ಚಿಗೆದ್ದು ಕಾಂಗ್ರೆಸ್‌ಗೆ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ ಎಂದರು. ಇನ್ನು ಮೊನ್ನೆಯಷ್ಟೇ ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಖರ್ಗೆ ಅವರು ಏನು ಬಯಸುತ್ತಾರೋ ಅದನ್ನು ಈಡೇರಿಸುವ ಕೆಲಸ ನನ್ನದು ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಸಿಎಂ ಆಗುವ ಬಗ್ಗೆ ಖರ್ಗೆ ಇರಾದೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.