ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಕಣಕ್ಕಿಳಿಯಲಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವೆ, ಚನ್ನೇಶಪುರದಲ್ಲಿ ನಡೆದ ಅಭಿಮಾನಿಗಳ ಸ್ವಾಭಿಮಾನದ ಸಂಕಲ್ಪ ಸಭೆಯಲ್ಲಿ ನಿರ್ಧಾರ ಮಾಡಿದ್ದು,ಅಭಿಮಾನಿಗಳ ಒತ್ತಡ ಹೆಚ್ಚಾಗಿದೆ. ಕೆಲವರು ವಿಷ ಕುಡಿಯಲು ಹೋಗಿದ್ದರು. ಇದೇ ಕಾರಣಕ್ಕೆ ನಾನು ಸ್ಪರ್ಧೆಗಿಳಿದಿದ್ದೇನೆ ಎಂದು ತಿಳಿಸಿದರು.
ಚನ್ನಗಿರಿ ಕ್ಷೇತ್ರದಿಂದ ಮಾಡಾಳ್ ಮಲ್ಲಿಕಾರ್ಜನ ಬಿಜೆಪಿ ಟಿಕೆಟ್ ಕೇಳಿದ್ದು, ಅವರಿಗೆ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಲು ತೀರ್ಮಾನ ಕೈಗೊಳ್ಳಲಾಗಿದೆ, ಬಿಜೆಪಿ ಎಚ್ ಎಸ್ ಶಿವಕುಮಾರ್ ಗೆ ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು,ಈ ಹಿನ್ನೆಲೆ ತಂದೆ, ಮಗ ಮತ್ತು ಬೆಂಬಲಿಗರೊಂದಿಗೆ ಸೇರಿ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸುತ್ತೇನೆ ಎಂದು ವಿವರಿಸಿದರು.
ಅಂದಹಾಗೆ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮಾಡಾಳ್ ಬಿಡುಗಡೆ ಆಗಿದ್ದಾರೆ.