Sunday, September 24, 2023
spot_img
- Advertisement -spot_img

ಶಾಸಕ ಅಜಯ್‌ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ: ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ ಡಾ.ಅಜಯ್‌ ಸಿಂಗ್ ಅವರ ನಿವಾಸದ ಆವರಣದಲ್ಲೇ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿಯ ಶರಣ‌ನಗರದಲ್ಲಿರುವ ಡಾ.ಅಜಯ್‌ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತನನ್ನು ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಎಂದು ಗುರುತಿಸಲಾಗಿದೆ. ಆದರೆ ಆತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ​

ಇದನ್ನೂ ಓದಿ: ‘ರಾಜ್ಯದಲ್ಲಿ ಪೊಲೀಸರು ಮಂತ್ರಿಗಳ ಕೈಗೊಂಬೆಯಾಗಿದ್ದಾರೆ’

ಶಾಸಕ ಅಜಯ್​ ಸಿಂಗ್​ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದೇವಪ್ಪ ಅವರ ಪತ್ನಿ ಮೂರು ವರ್ಷದ ಹಿಂದೆ ಮೃತಪಟ್ಟಿದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles