ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು.
ಈ ಹಿನ್ನೆಲೆ ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಅವರು ತಮ್ಮ ಮನೆಯ ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ್ದಾರೆ. ಅದರಲ್ಲಿ ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ ಎಂದು ಬರೆದಿದ್ದಾರೆ.
ಕೆಲ ದಿನಗಳ ಹಿಂದೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಸ್ಥರು, ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಜಮಾಪುರ ಗ್ರಾಮಸ್ಥರು ಹಾಗೂ ಚಾಮರಾಜನಗರ ಜನರು ಕರೆಂಟ್ ಬಿಲ್ ಕಟ್ಟಲು ನಿರಾಕರಿಸಿದ್ದರು. ಸದ್ಯ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ.
ಗೃಹ ಜ್ಯೋತಿ ಎಲ್ಲ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ನಿಡೋದಾಗಿ ಭರವಸೆ ನೀಡಿತ್ತು.
ಗೃಹ ಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳೆಗೆ 2000 ರೂ ನೀಡುತ್ತೇವೆ ಎಂದು ಘೋಷಿಸಿತ್ತು.
ಅಷ್ಟೇ ಅಲ್ಲದೇ ಎಲ್ಲ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 1500 ನ್ನು ಎರಡು ವರ್ಷದವವರೆಗೆ ಒದಗಿಸಲಾಗುತ್ತದೆ ಎಂದಿದೆ.