ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸವು ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮಂಡ್ಯದಲ್ಲಿ 260 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಅಮಿತ್ ಷಾ ಡೇರಿ ಉದ್ಘಾಟಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಷಾ ಮಂಡ್ಯದಲ್ಲಿ ನಡೆಯುವ ಜನಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಅಷ್ಟೇ ಅಲ್ಲದೆ ಸಮಾವೇಶದಲ್ಲಿ 1 ಲಕ್ಷ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಘಟಕವು ಚುರುಕಾಗಿದ್ದು, ಚಾಣಕ್ಯನ ಸಾಲುಸಾಲು ಸಭೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಸಂಘಟನೆ ಹಾಗೂ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾ ನಿರಂತರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕ್ರಮಗಳು ರೂಪಿಸುತ್ತಿದೆ.
ಬಿಜೆಪಿಯು ಇಲ್ಲಿ ಗೆಲುವು ಸಾಧಿಸುವ ಜೊತೆಗೆ ಕಾಂಗ್ರೆಸ್ ಮತಬ್ಯಾಂಕ್ ತನ್ನೆಡೆಗೆ ಸೆಳೆದುಕೊಳ್ಳಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ತನ್ನ ವಿರೋಧಿ ಎಂದು ಬಿಂಬಿಸಿಕೊಳ್ಳುವುದೇ ಬಿಜೆಪಿಯ ಮುಖ್ಯಕಾರ್ಯತಂತ್ರವಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳನ್ನೇ ಗುರಿಯಾಗಿಸಿ ತಂತ್ರ ಹೆಣೆಯಲಾಗುತ್ತಿದೆ.
ಸ್ಥಿತಿಗತಿಯನ್ನು ವಿಸ್ತೃತವಾಗಿ ಅವಲೋಕಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವನ್ನು ನಿಗದಿಪಡಿಸಲಾಗುವುದು. ಅಮಿತ್ ಶಾ ಅವರ ಬೆಂಗಳೂರು ಹಾಗೂ ಮಂಡ್ಯ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಭಾಗವಹಿಸುತ್ತಿಲ್ಲ.ವಿವಿಧ ಜಿಲ್ಲೆಯಲ್ಲಿ ಪೂರ್ವನಿಗದಿತ ಪ್ರವಾಸಗಳು ಇದ್ದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಜನವರಿ 1ರಂದು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.