ಮಂಡ್ಯ: ಇಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆ ನಡೆಸಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಬರಲೇ ಬೇಕೆಂದು ಒತ್ತಾಯಿಸಿದ್ದಾರೆ. ಸಭೆಯಲ್ಲಿ ಮದ್ದೂರು ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶೇಕಡ 50 ಪರ್ಸೆಂಟ್ ರಷ್ಟು ಜನರು ಸುಮಲತಾ ಕಾಂಗ್ರೆಸ್ ಸೇರಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನುಳಿದ 50 ಪರ್ಸೆಂಟ್ ಬೆಂಬಲಿಗರು ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಒಂದು ವೇಳೆ ವಿಧಾನಸಭೆಗೆ ಸುಮಲತಾ ಎಂಟ್ರಿಯಾದರೆ ಯಾವ ಕ್ಷೇತ್ರ ಆಯ್ಕೆ ಮಾಡ್ತಾರೆ ಅನ್ನೋದೇ ಸದ್ಯದ ಕುತೂಹಲ.
ಮಂಡ್ಯ ಕ್ಷೇತ್ರ ಸುಮಲತಾ ಅವರ ಪತಿ ಅಂಬರೀಶ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಹಾಗಾಗಿ ಆ ಕ್ಷೇತ್ರದಿಂದಲೇ ಸುಮಲತಾ ಕಣಕ್ಕಿಳಿತಾರೆ ಎನ್ನುವ ಲೆಕ್ಕಾಚಾರವಿದೆ. ಈಗಾಗಲೇ ಆರ್. ಅಶೋಕ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ಕೆಲ ಪ್ರಮುಖ ಬಿಜೆಪಿ ನಾಯಕರು ಸುಮಲತಾ ಅಂಬರೀಶ್ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಅಲ್ಲದೇ ಹೈಕಮಾಂಡ್ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ಮುಗಿದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೀಗ ಸುಮಲತಾ ಅಂಬರೀಶ್ ಒಂದು ವೇಳೆ ರಾಜ್ಯ ರಾಜಕಾರಣ ಪ್ರವೇಶ ಮಾಡಿದರೆ ಯಾವ ಪಕ್ಷದಿಂದ ಕಣಕ್ಕಳಿಯುತ್ತಾರೆ ಎನ್ನುವುದೇ ಕುತೂಹಲ.