ಮಂಡ್ಯ : ಮುಂದಿನ ಲೋಕಸಭಾ ಎಲೆಕ್ಷನ್ ನಲ್ಲಿ ನಟಿ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಎದುರಾಳಿ ಅಭ್ಯರ್ಥಿಯಾಗಿ ನಿಲ್ಲಲಿದ್ದು, ಮುಂದಿನ ಎಲೆಕ್ಷನ್ ನಲ್ಲಿ ಸುಮಲತಾರನ್ನು ಸೋಲಿಸಬೇಕು ಎಂಬುದೇ ನಮ್ಮ ಗುರಿ ಎಂದು ಪಂಚರತ್ನ ವೇದಿಕೆಯಲ್ಲಿ ಶಾಸಕ ಸಿಎಸ್ ಪುಟ್ಟರಾಜು ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿಯವರನ್ನು ವಿಧಾನ ಸಭೆ ಎಲೆಕ್ಷನ್ ನಲ್ಲಿ ರಾಮನಗರದಿಂದ ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೇ ಸಂಸದೆ ಸುಮಲತಾ ಕ್ಷೇತ್ರದ ಶಾಸಕರ ವಿರುದ್ಧ ಸುಮಲತಾ ಪದೇ ಪದೇ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಮುಂದಿನ ಎಲೆಕ್ಷನ್ ನಲ್ಲಿ ಸೋಲಿಸಬೇಕು ಎಂದು ಜೆಡಿಎಸ್ ಶಾಸಕರು ರಣತಂತ್ರ ರೂಪಿಸುತ್ತಿದ್ದು, ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂದು ಪಣ ತೊಟ್ಟಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಂಸದೆ ಸುಮಲತಾ ಮತ್ತು ಬೆಂಬಲಿಗರು ಕಮಿಷನ್ ಪಡೆದಿದ್ದಾರೆ ಎಂದು ಶಾಸಕರಾದ ಸಿ.ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದರು. ಪಡೆದಿಲ್ಲ ಎನ್ನುವುದಾದರೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಸುಮಲತಾ ಅಂಬರೀಷ್ ಗೆ ಹೇಳಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೆ, ಆಣೆ ಪ್ರಮಾಣಕ್ಕೆ ನಾನು ಸಿದ್ಧಳಿದ್ದೇನೆ ಎಂದಿದ್ದರು.
ಅಂದಹಾಗೆ ಕಳೆದ ಚುನಾವಣೆಯಲ್ಲಿ ಸುಮಲತಾ ವಿರುದ್ಧ ನಿಖಿಲ್ ಸ್ಪರ್ಧೇ ಮಾಡಿ ಗೆದ್ದು, ಲೋಕಸಭೆ ಪ್ರವೇಶಿಸಿದ್ದರು. ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದು ಬರಬೇಕು ಎಂದು ಜೆಡಿಎಸ್ ನವರು ರಣ ತಂತ್ರ ಮಾಡಿದ್ದಾರೆ.