Wednesday, May 31, 2023
spot_img
- Advertisement -spot_img

ಅಮಿತ್ ಷಾ ಪ್ರವಾಸದ ವೇಳೆ ರೋಡ್ ಶೋ ರದ್ದುಪಡಿಸಲಾಗಿದೆ : ಸುದರ್ಶನ್ ಮೂಡುಬಿದ್ರೆ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೆ. 11 ರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಪಡಿಸಲಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮಿತ್ ಶಾ ಪುತ್ತೂರಿನಿಂದ ಮಂಗಳೂರಿಗೆ ಬರುವ ಕಾರ್ಯಕ್ರಮದಲ್ಲಿ ಅರ್ಧ ಗಂಟೆ ವಿಳಂಬವಾಗಲಿದೆ. ಕತ್ತಲೆಯಾಗುವ ಕಾರಣ ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದುಪಡಿಸಲಾಗಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲಕ್ಕೆ ಆಗಮಿಸಲಿರುವ ಅಮಿತ್ ಶಾ 3.15 ಕ್ಕೆ ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರದ ಪಕ್ಕದಲ್ಲೇ ಧರ್ಮಶ್ರೀ ಪ್ರತಿಷ್ಠಾನದಿಂದ ನಿರ್ಮಿಸಲಾದ ಭಾರತ ಮಾತಾ ಮಂದಿರ ಲೋಕಾರ್ಪಣೆ ಮಾಡಲಿದ್ದಾರೆ.

ಹೆಲಿಕಾಪ್ಟರ್ ನಲ್ಲಿ ಈಶ್ವರಮಂಗಲದಿಂದ ಪುತ್ತೂರಿಗೆ 3.40 ಕ್ಕೆ ಬರುವ ಪುತ್ತೂರಿನಲ್ಲಿ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಕೆಂಜಾರಿನಲ್ಲಿರುವ ಶ್ರೀದೇವಿ ಕಾಲೇಜಿನಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇದರಲ್ಲಿ ಆರು ಜಿಲ್ಲೆಗಳ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೇ ಕ್ಯಾಂಪ್ಕೋ ಫ್ಯಾಕ್ಟರಿ ವೀಕ್ಷಿಸಿ ಹೆಲಿಕಾಪ್ಟರ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 6 ಗಂಟೆಗೆ ತಲುಪಲಿದ್ದಾರೆ. ಸಂಜೆ 6 ಗಂಟೆಯ ಬಳಿಕ ಮಂಗಳೂರಿನ ಕೆಂಜಾರಿನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಸಭೆ ಮುಗಿಸಿ ರಾತ್ರಿ 8. 20 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.

Related Articles

- Advertisement -

Latest Articles