ಕೊಪ್ಪಳ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕ,ಕೆಪಿಸಿಸಿ ಅಧ್ಯಕ್ಷ ಡಿ ಕೆಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್‌ನನ್ನು ಟೆರರಿಸ್ಟ್ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ? ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಅಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಹೇಳಿದರು ಎಂದು ಡಿಕೆಶಿ ಪ್ರಶ್ನಿಸಿದ್ದರು. ಈ ಹಿನ್ನೆಲೆ ಬಿಜೆಪಿ ನಾಯಕರು ಡಿಕೆಶಿ ವಿರುದ್ಧ ಕಿಡಿಕಾರಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿ, ಮಂಗಳೂರಿನ ಕಮಿಷನರ್ ತನಿಖೆ ಮಾಡದೆ ಆರೋಪಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಭ್ರಷ್ಟಾಚಾರ ಬಯಲಿಗೆಳೆದ ಹಿನ್ನೆಲೆ ಬ್ಲಾಸ್ಟ್ ಪ್ರಕರಣ ನಡೆದಿದೆ. ವಿಷಯ ಡೈವರ್ಟ್ ಮಾಡಲು ಬಿಜೆಪಿ ಆಡಿದ ಕೆಲಸ ಅದು. ಈಗಲೂ ದಕ್ಷಿಣ ಕನ್ನಡ, ಶಿವಮೊಗ್ಗ ಘಟನೆಗಳಿಂದ ಭ್ರಷ್ಟಾಚಾರ ಡೈವರ್ಟ್ ಮಾಡಲು ಹೊರಟಿದೆ.
ನನಗೆ ಯಾರ ಸಪೋರ್ಟ್ ಬೇಕಿಲ್ಲ. ನಾನು ನನ್ನ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುತ್ತೇನೆ. ಬಿಜೆಪಿಗೆ ಯಾವಾಗಲು ಡಿಕೆಶಿನೆ ಟಾರ್ಗೆಟ್ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನ ವೋಟರ್ ಐಡಿ ಹಗರಣ ವಿಷಯವನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಆಟ ಆಡುತ್ತಿದೆ. ಬಿಜೆಪಿ ಸರ್ಕಾರದ ಕೊನೆ ದಿನಗಳು ಬಂದಿದೆ ಇನ್ನೇನು 100 ದಿನ ಇದೆ ಎಂದರು.