ನವದೆಹಲಿ: ದೆಹಲಿ ನ್ಯಾಯಾಲಯವು ಮನೀಶ್ ಸಿಸೋಡಿಯಾರನ್ನು ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನ ಅಕ್ರಮಗಳಿಗೆ ಸಂಬಂಧಪಟ್ಟ ಹಣ ವರ್ಗಾವಣೆಗೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರ ಜೈಲು ವಾಸ ಮುಂದುವರೆದಿದೆ. ಹೀಗಾಗಿ ನ್ಯಾಯಾಂಗ ಬಂಧನದ ಅವಧಿಯಲ್ಲಿ ಕೆಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಸ್ತಕಗಳನ್ನು ಕೊಂಡೊಯ್ಯಲು ಅವಕಾಶ ನೀಡುವಂತೆ ಮನೀಶ್ ಸಿಸೋಡಿಯಾ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.
ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಮುಂದೂಡಿದೆ. ಇದೀಗ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.
ಅಷ್ಟೇ ಅಲ್ಲದೇ ಈ ಬಗ್ಗೆ ಅರ್ಜಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಅವರಿಗೆ ಹೇಳಿದೆ ಎಂದು ತಿಳಿದು ಬಂದಿದೆ. ಮನಿ ಲಾಂಡರಿಂಗ್ ವಿರೋಧಿ ತನಿಖಾ ಸಂಸ್ಥೆ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.