ಮುಂಬೈ: ಮಹಾರಾಷ್ಟ್ರದಲ್ಲಿ ‘ಮರಾಠಾ ಮೀಸಲಾತಿ’ ಕಿಚ್ಚು ಜೋರಾಗಿದ್ದು, ಉದ್ರಿಕ್ತ ಹೋರಾಟಗಾರು ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಬಸ್‌ಗೆ ಬೆಂಕಿ ಹಚ್ಚಿದ್ದು, ಅದೃಷ್ಟವಶಾತ್ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.
ಮಹಾರಾಷ್ಟ್ರದ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆಸಿದ್ದು, ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಬಸ್ ಬೆಂಕಿಗಾಹುತಿಯಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ; ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಆಯ್ಕೆ!
ಜಾಲ್ನಾ ಜಿಲ್ಲೆಯ ಶಹಾಗಡ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ತೆರಳಿದ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಬಳಿಕ ಜಾಲ್ನಾ ಜಿಲ್ಲೆಯ ವಡಿಗೋದ್ರಿ ಬಳಿ ವಾಹನಗಳ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದರು.
ಈ ವೇಳೆ ಕೆಎಸ್ಆರ್‌ಟಿಸಿ ಹಾಗೂ ಮಹಾರಾಷ್ಟ್ರ ಸಾರಿಗೆ ಬಸ್ ಸೇರಿದಂತೆ ಆರಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿಗೆ ಆಹುತಿಯಾದ ಕೆಎಸ್ಆರ್‌ಟಿಸಿ ಬಸ್ ನಲ್ಲಿ 45 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಮಹಾರಾಷ್ಟ್ರ ಪೊಲೀಸರ ಜೊತೆ ಕರ್ನಾಟಕ ಸಾರಿಗೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.