ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ‘ಕರ್ನಾಟಕ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಈ ನಡುವೆ ಜನಾರ್ದನ ರೆಡ್ಡಿಯನ್ನು ಮಾಜಿ ಶಾಸಕ, ಬಿಜೆಪಿ ನಾಯಕ ಪ್ರತಾಪ್ ಗೌಡ ಪಾಟೀಲ್ ಭೇಟಿ ಮಾಡಿದ್ದಾರೆ.
ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 55,731 ಮತಗಳನ್ನು ಪಡೆದು ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ ವಿರುದ್ಧ ಸೋಲು ಕಂಡರು. ಬಳಿಕ ಪಕ್ಷದಲ್ಲಿ ಯಾವುದೇ ಸ್ಥಾನ ಮಾನ ಸಿಕ್ಕಿಲ್ಲ. ಹೆಚ್. ವಿಶ್ವನಾಥ್ ಉಪ ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್ ಸದಸ್ಯರಾದರು. ಆದರೆ ಪ್ರತಾಪ್ ಗೌಡ ಪಾಟೀಲ್ ಯಾವುದೇ ಸ್ಥಾನಮಾನ ಪಡೆಯುವಲ್ಲಿ ವಿಫಲರಾದರು.ಪ್ರತಾಪ್ ಗೌಡ ರಾತ್ರೋರಾತ್ರಿ ಜನಾರ್ದನ್ ರೆಡ್ಡಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದರು. “ನಾನು ಮುಂದಿನ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ” ಎಂದು ಹೇಳಿದರು. ಅಂದ ಪ್ರತಾಪ್ ಗೌಡ ಭೇಟಿ ಹಿನ್ನೆಲೆ ಏನು ? ಪಕ್ಷಕ್ಕೆ ಯಾರು, ಯಾರು ಸೇರುತ್ತಾರೆ? ಎಂದು ಈಗ ಚರ್ಚೆಗಳು ನಡೆಯುತ್ತಿವೆ.