ಬೆಂಗಳೂರು: ರಾಜ್ಯದ ಬರ ತಾಲೂಕುಗಳ ಹೆಸರು ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ. ಮಧ್ಯಾಹ್ನ ಕ್ಯಾಬಿನೆಟ್ ಸಭೆ ಕರೆಯಲಾಗಿದ್ದು, ಸಭೆ ಬಳಿಕ ಬರ ತಾಲೂಕುಗಳ ಘೋಷಣೆ ಮಾಡುವ ಸಂಭವವಿದೆ ಎಂದು ತಿಳಿದುಬಂದಿದೆ.
ರಾಜ್ಯದ 113 ತಾಲೂಕುಗಳಲ್ಲಿ ಬರವಿದ್ದು, ಇದರಲ್ಲಿ 62 ತಾಲೂಕುಗಳಲ್ಲಿ ಸಂಪೂರ್ಣ ಬರ ಎಂದು ವರದಿ ನೀಡಲಾಗಿದೆ. ಕೇಂದ್ರದ ಮಾನದಂಡದ ಪ್ರಕಾರವೇ ಹಲವು ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಬರಪೀಡಿತ ತಾಲೂಕುಗಳಿಗೆ ನೀಡಬೇಕಾದ ಅನುದಾನ, ನೆರವು ಸಂಬಂಧ ಚರ್ಚೆ ನಡೆಯಲಿದೆ.
ಇದನ್ನೂ ಓದಿ: ‘ಕಾವೇರಿ’ಗಾಗಿ ಕಬ್ಬು ಚಳವಳಿ: ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸಿಎಂ ಭೇಟಿ
ಇದರ ಜೊತೆ ಕುಡಿಯುವ ನೀರಿನ ಸಮಸ್ಯೆ, ಕಾವೇರಿ ನೀರು ಹಂಚಿಕೆ ವಿವಾದ, ಬೆಳೆ ನಾಶ, ಬಿಬಿಎಂಪಿ ಚುನಾವಣೆ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಈವರೆಗೆ ಅನುದಾನ ಬಿಡುಗಡೆಯಾಗದ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಕುರಿತಂತೆ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.