ಬೆಂಗಳೂರು: ಚುನಾವಣೆ ಸನಿಹದಲ್ಲಿದ್ದು, ಸಿಎಂ ಕುರ್ಚಿ ಯಾರ ಪಾಲಾಗಲಿದೆ ಅನ್ನೋ ಚರ್ಚೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದು, ಮಾಜಿ ಸಚಿವ ಎಂ.ಬಿ.ಪಾಟೀಲ್ ಸಿಎಂ ಆಗಲು ನನಗೂ ಆಸೆ ಇದೆ ಎಂದು ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ಗೆದ್ದರೆ ಮುಂದಿನ ಸಿಎಂ ನಾನೇ ಎಂದು ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಮಧ್ಯೆ ಫೈಟ್ ನಡೆಯುತ್ತಿರೋ ಮಧ್ಯೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಸಿಎಂ ಆಗಬೇಕೆಂಬ ಕನಸನ್ನು ಹೇಳಿಕೊಂಡಿದ್ದಾರೆ.
ಸಿಎಂ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನೇ ಮುಂದಿಟ್ಟಿರುವ ಎಂ.ಬಿ.ಪಾಟೀಲ್, ಯಾರು ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬುದನ್ನೂ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳ ಮುಖ್ಯಸ್ಥರು ಖರ್ಗೆ. ಸಿಎಂ ಆಗುವ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದೇಶಪಾಂಡೆ ಇದ್ದಾರೆ. ಎರಡನೇ ಸಾಲಿನಲ್ಲಿ ನಾನು, ಡಿಕೆಶಿ ಹೆಚ್.ಕೆ.ಪಾಟೀಲ್, ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ ಇದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ಮೊನ್ನೆಯಷ್ಟೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಖರ್ಗೆ ಸಿಎಂ ಸ್ಥಾನಕ್ಕೆ ಬಯಸಿದರೆ ನನ್ನ ಅವಕಾಶ ಬಿಟ್ಟು ಕೊಡುತ್ತೇನೆ ಎಂದು ಹೇಳಿದ್ದರು.