ಮೈಸೂರು: ಸಿಎಂ ಸಿದ್ದರಾಮಯ್ಯರವರೇ ಪೂರ್ಣಾವಧಿ ಇರಲಿದ್ದು, ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುತ್ತೂರಿನಲ್ಲಿ ಮಾತನಾಡಿ, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಅಧಿಕಾರವಧಿಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನೂ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಸಿಎಂ ಪಟ್ಟದ ಹಗ್ಗಜಗ್ಗಾಟ ಫಿಪ್ಟಿ ಫಿಫ್ಟಿ ಸೂತ್ರದೊಂದಿಗೆ ಸುಖಾಂತ್ಯವಾಗಿದೆ ಅಂತಲೇ ಎಲ್ಲರೂ ಭಾವಿಸಿದ್ದರು. ಆದ್ರೆ ಇದಕ್ಕೆ ಸಚಿವ ಎಂ.ಬಿ ಪಾಟೀಲ್ ಹೊಸ ಟ್ವಿಸ್ಟ್ ನೀಡಿದ್ದು, ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದೆ.