ಬೆಂಗಳೂರು : ಸೆಪ್ಟೆಂಬರ್ 11ರಂದು ಬಂದ್ ಆಚರಿಸಲು ಕರೆ ನೀಡಿರುವುದನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು 32 ಖಾಸಗಿ ಸಾರಿಗೆ ಸಂಘಗಳನ್ನು ಒಳಗೊಂಡ ಒಕ್ಕೂಟ ಸೆ. 11ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಸೇವೆ ಸ್ಥಗಿತಗೊಳಿಸಿ ಬಂದ್ ಆಚರಿಸಲು ಕರೆ ನೀಡಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಅರಿತ ಸರ್ಕಾರ ಒಕ್ಕೂಟದ ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದೆ. ಆದರೆ, ಅದು ಫಲ ಪ್ರದವಾಗಿಲ್ಲ.
ಇದನ್ನೂ ಓದಿ : ಸೆ.11ರಂದು ಆಟೋ, ಟ್ಯಾಕ್ಸಿ ಸೇವೆ ಬಂದ್ : ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಚಾಲಕರು
ಬುಧವಾರ ಒಕ್ಕೂಟದ ಮುಖಂಡರ ಜೊತೆ ಸಭೆ ನಡೆಸಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೇಡಿಕೆ ಈಡೇರಿಸುತ್ತೇವೆ ಬಂದ್ ಕರೆ ಹಿಂಪಡೆಯಿರಿ ಎಂದರೂ, ಒಕ್ಕೂಟದ ಮುಖಂಡರು ಒಪ್ಪಿಲ್ಲ. ಇಂದು ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೊಂದು ಸುತ್ತಿನ ಸಭೆ ನಡೆಸಿದ್ದು, ಅದೂ ವಿಫಲವಾಗಿದೆ. ನಾವು ಬಂದ್ ಮಾಡಿಯೇ ತೀರುತ್ತೇವೆ ಎಂದು ಒಕ್ಕೂಟದ ಮುಖಂಡರು ಪಟ್ಟು ಹಿಡಿದಿದ್ದಾರೆ. ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಹೇಮಂತ್ ರನ್ನು ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದಾರೆ.
ನಾಳೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಇಲಾಖೆ ಆಯುಕ್ತರ ಜೊತೆ ಮತ್ತೊಂದು ಸುತ್ತಿನ ಸಭೆ ಇದೆ. ಈ ಸಭೆಯ ನಂತರ ಅಂತಿಮ ತೀರ್ಮಾನ ಹೇಳುವುದಾಗಿ ಖಾಸಗಿ ಸಾರಿಗೆ ಒಕ್ಕೂಟಗಳ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.