ಬೆಂಗಳೂರು: ಕಾವೇರಿ ನೀರು ಸಮಸ್ಯೆಗೆ ಮೇಕೆದಾಟು ಒಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸಭೆ ಬಳಿಕ ಮಾತನಾಡಿದ ಅವರು, ನಮ್ಮ ಎಲ್ಲಾ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದೇವೆ. ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಮಗೆ ಆದೇಶ ನೀಡಿದೆ. ನೀರು ಇಲ್ಲದಿರುವುದು ಕರ್ನಾಟಕಕ್ಕೆ ದೊಡ್ಡ ನೋವಾಗಿದೆ ಎಂದಿದ್ದಾರೆ.
ನಾವೂ ತಮಿಳುನಾಡಿನ ರೈತರನ್ನು ಗೌರವಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿಯಿದೆ. ಮೇಕೆದಾಟು ಯೋಜನೆಯೊಂದೇ ಇದಕ್ಕೆ ಪರಿಹಾರ ಎಂಬುದು ನಮ್ಮ ಮನವಿಯಾಗಿದೆ. ಇದರಿಂದ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ‘ಗ್ಯಾಸ್ ದರ ಇಳಿಕೆ ಚುನಾವಣಾ ಗಿಮಿಕ್, ಬಾಯಿ ಬಡಾಯಿ’
ಇದಕ್ಕೂ ಮೊದಲು ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸಭೆ ನಡೆಸಲಾಗಿದೆ. ಹಲಿಯ ಕರ್ನಾಟಕ ಭವನ-1ರಲ್ಲಿ ಸಭೆ ನಡೆದಿದ್ದು, ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ರಾಜ್ಯ ಪರ ವಕೀಲರಾದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಕೀಲ ಮೋಹನ್ ಕಾತರಾಕಿ ಸೇರಿ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.