ಮಂಡ್ಯ : ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ರೈತರು ಕಳೆದೊಂದು ವಾರದಿಂದ ನಡೆಸುತ್ತಿರುವ ಕಾವೇರಿ ಹೋರಾಟವು ಇಂದೂ ಕೂಡ ಮುಂದುವರೆದಿದೆ. ಪ್ರತಿಭಟನೆ ಘೋಷಣೆಗಳ ಜೊತೆಯೇ ರೈತರು ಒಂದು ಹೆಜ್ಜೆ ಮುಂದೆ ಹೋಗಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯ ತಪ್ಪಿಸಲು ಯೋಚಿಸಿರುವ ರೈತರು ಖದ್ದಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ : ಕಾವೇರಿ ನೀರು ಹಂಚಿಕೆ ವಿವಾದ; ಸುಪ್ರೀಂಗೆ ಪ್ರತ್ಯೇಕ ಅರ್ಜಿ ಸಲ್ಲಿಸಲು ಮುಂದಾದ ರೈತ ಸಂಘ!
ಸೋಮವಾರವಷ್ಟೇ ಈ ಕುರಿತು ತಿಳಿಸಿದ್ದ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಿರಿಯ ವಕೀಲರ ಮೂಲಕ ಸುಪ್ರೀ ಕೋರ್ಟ್‌ನಲ್ಲಿ ರಾಜ್ಯದ ಪರ ಅರ್ಜಿ ಸಲ್ಲಿಸಲು ಇಂದು ದೆಹಲಿಗೆ ತೆರಳಿದ್ದಾರೆ. ಈ ಅರ್ಜಿಯ ಮೂಲಕ ಕಾವೇರಿ ಪ್ರದೇಶದ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲಿದ್ದಾರೆ.
ಕಾವೇರಿ ಕೊಳ್ಳದಲ್ಲಿರುವ ನಾಲ್ಕು ಜಲಾಶಯಗಳ ನೀರಿನ ಮಟ್ಟ ಹಾಗೂ ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ, ಕುಡಿಯಲು ನೀರಿನ ಅಗತ್ಯತೆಯ ಬಗ್ಗೆ ಅಂಕಿ ಅಂಶ ಸಹಿತ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆಗೆ ಸಿದ್ಧತೆ ನಡೆಸಿದ್ದಾರೆ.
ಇದನ್ನೂ ಓದಿ : 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟ ಆರಂಭಿಸಿದ್ದಾರೆ. ನಿಗದಿಯಂತೆ ಇಂದು ಅರ್ಜಿ ಸಲ್ಲಿಕೆಯಾದರೆ ನಾಳೆಯೇ ಸುಪ್ರೀಂ ಕೋರ್ಟ್ ವಿಚಾರಣೆ ಸಾಧ್ಯತೆ ಇದೆ. ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರದ ಅರ್ಜಿಯ ಜೊತೆ ರೈತಸಂಘದ ಅರ್ಜಿ ವಿಚಾರಣೆಯೂ ನಡೆಯುವ ಲಕ್ಷಣಗಳು ಕಂಡುಬರುತ್ತಿವೆ. ದರ್ಶನ್ ಪುಟ್ಟಣ್ಣಯ್ಯ ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನದಿಂದ ಪೂರ್ವ ತಯಾರಿ ನಡೆಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.