ಜಾರ್ಖಂಡ್: ರಾಂಚಿಯ ರಾಜಭವನದಲ್ಲಿ 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಬಳಸಲಾಗಿದ್ದ ಮಿಗ್-211 ಯುದ್ಧ ವಿಮಾನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.
ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡ ಈ ವೇಳೆ ಉಪಸ್ಥಿತರಿದ್ದರು. “ಇಂದು, ನಮ್ಮ ಅತ್ಯಂತ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜಭವನದಲ್ಲಿ Mikoyan Gurevich (MiG-211) ಫೈಟರ್ ಜೆಟ್ ವಿಮಾನವನ್ನು ಉದ್ಘಾಟಿಸಿದರು.
ಇದನ್ನೂ ಓದಿ: ‘ಸೋನಿಯಾ ಗಾಂಧಿ ನನ್ನನ್ನು ಸಿಎಂ ಮಾಡ್ತಾರೆ’: ‘ಕೈ’ ನಾಯಕನ ವಿಡಿಯೋ ವೈರಲ್


ರಾಜ್ಯಪಾಲ ರಾಧಾಕೃಷ್ಣನ್ ಅವರು ಎಕ್ಸ್(ಟ್ವಿಟ್ಟರ್)ನಲ್ಲಿ, ಇದನ್ನು 1964 ರಲ್ಲಿ ಭಾರತೀಯ ವಾಯುಪಡೆಗೆ ಸೇರಿಸಲಾಗಿತ್ತು. ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಯಶಸ್ವಿಯಾಗಿ ಬಳಸಲಾಯಿತು ಎಂದು ಬರೆದುಕೊಂಡಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲರ ಕುಟುಂಬ ಸದಸ್ಯರನ್ನೂ ಪ್ರಧಾನಿ ಮೋದಿ ಭೇಟಿ ಮಾಡಿದರು. “ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ, ಇಂದು ರಾಜಭವನದಲ್ಲಿ ನನ್ನ ಕುಟುಂಬವನ್ನು ಭೇಟಿ ಮಾಡಿದ್ದಕ್ಕಾಗಿ ನಮ್ಮ ಆತ್ಮೀಯ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅವರು ನನ್ನ ಕುಟುಂಬದ ಮೇಲೆ ವಿಶೇಷವಾಗಿ ನನ್ನ ಕುಟುಂಬದ ಮೇಲೆ ಧಾರೆ ಎರೆದ ಪ್ರೀತಿಗೆ ಚಿರಋಣಿ ಎಂದು ರಾಜ್ಯಪಾಲ ರಾಧಾಕೃಷ್ಣನ್ ಹೇಳಿದ್ದಾರೆ.
ಅಷ್ಟೇ ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಫೈಟರ್ ಜೆಟ್ ಮತ್ತು ಪ್ರಧಾನಿ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು, ಮೋದಿ ಅವರು ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳ ಖುಂಟಿ ಜಿಲ್ಲೆಯ ಉಲಿಹಾತುಗೆ ಭೇಟಿ ನೀಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.