ಕಲಬುರಗಿ: ಬಿಜೆಪಿ ತಂದ ಅನುದಾನ ಇಂದಿನ ಸರ್ಕಾರ ಬಿಡುಗಡೆ ಮಾಡದೇ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೆಲಸ ಮಾಡಿದ ಗುತ್ತಿಗೆದಾರರಿಗೆ ಹೆದರಿಸಿ ಹಣ ವಸೂಲಿ ಮಾಡುವ ದಂಧೆ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ರಾಜ್ಯದ ಜನ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಚೈತ್ರಾ ವಿಷ ಸೇವಿಸಿಲ್ಲ; ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ ವೈದ್ಯರು!
ಸಚಿವ ಡಿ. ಸುಧಾಕರ್ ಸಾರ್ವಜನಿಕವಾಗಿ ದಲಿತರನ್ನು ನಿಂದಿಸಿ ದೌರ್ಜನ್ಯ ಮಾಡುತ್ತಿದ್ದಾರೆ, ಬಿಜೆಪಿ ಸುಧಾಕರ್‌ರ ರಾಜೀನಾಮೆಗೆ ಒತ್ತಾಯಿಸಿದೆ, ರಾಜ್ಯ ಸರ್ಕಾರದ ಮುಖ್ಯಮಂತ್ರಿ ದಲಿತ ವಿರೋಧಿ ಡಿ ಸುಧಾಕರ್ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಲೂಟಿ ಸರ್ಕಾರ ಗ್ಯಾರಂಟಿಗಳ ನೆಪವೊಡ್ಡಿ ಈಗಾಗಲೇ ವಾಹನ ತೆರಿಗೆ ನಾಲ್ಕು ಪಟ್ಟು ಹೆಚ್ಚು ಮಾಡಿದ್ದಾರೆ,ಅಲ್ಲದೇ ರಾಜ್ಯದಲ್ಲಿ ಆಸ್ತಿ ಟ್ಯಾಕ್ಸ್ ಕೂಡ ಹೆಚ್ಚಾಗಿದೆ ಎಂದು ಹರಿಹಾಯ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.