ಚಿಕ್ಕಬಳ್ಳಾಪುರ: ಜಗತ್ತಿನಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೆ ಕಾಂಗ್ರೆಸ್‌ನವರು ನಾವೇ ಚೀನಾದ ವುಹಾನ್‌ಗೆ ಹೋಗಿ ಕೊರೊನಾ ವೈರಸ್ ಬಿಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ವಿಶ್ವದಲ್ಲೇ ಕೋವಿಡ್‌ನಿಂದ ಏನಾಗ್ತಿದೆ ಅಂತ ಜನಸಾಮಾನ್ಯರಿಗೆ ಗೊತ್ತಾಗುತ್ತಿದೆ. ಆದ್ರೆ ಕಾಂಗ್ರೆಸ್ ನಾಯಕರಿಗೆ ಯಾಕೆ ಇದು ಗೊತ್ತಾಗ್ತಿಲ್ಲ? ಯಾವುದೇ ಸರ್ಕಾರ ಇರ್ಲಿ, ಜನರ ರಕ್ಷಣೆಗೆ ಅದ್ಯತೆ ನೀಡಬೇಕು. ಸಹಕಾರ ಕೊಡದಿದ್ರೂ ಪರವಾಗಿಲ್ಲ ಸುಮ್ಮನಾದ್ರೂ ಇರಿ. ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡಬೇಡಿ ಎಂದು ಕಿಡಿಕಾರಿದ್ರು. ಇನ್ನೂ ಭಾರತ್ ಬಯೋಟೆಕ್‌ನ ನಸೆಲ್ ಸ್ಪೈ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನೆಜಲ್ ಸ್ಪೈ ವ್ಯಾಕ್ಸಿನೇಷನ್ ನಿಂದಾಗಿ ಮೂಗಿನ ಮೂಲಕ ಡ್ರಾಪ್ಸ್ ಹಾಕಿಕೊಳ್ಳಲು ಅವಕಾಶ ಆಗಲಿದೆ. ಇದು ಲಸಿಕೆ ನೀಡುವ ವೇಗವನ್ನು ಹೆಚ್ಚಿಸುತ್ತದೆ. ಇದು ಕೂಡ ಬಹಳ ಪ್ರಭಾವಿತವಾಗಿ ಕೆಲಸ ಮಾಡಲಿದೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ಲಸಿಕೆಗಳಿಗೆ ಯಾವುದೇ ಕೊರತೆಯಿಲ್ಲ. ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ಸ್ಟಾಕ್ ಇದೆ. ಇನ್ನೂ ನಸೆಲ್ ಸ್ಪೈ ಕೋವ್ಯಾಕ್ಸಿನ್, ಕೋವಿಶೀಲ್ಡ್, ಕಾರ್ಬೆವ್ಯಾಕ್ಸ್‌ಗೆ ಕೇಂದ್ರಕ್ಕೆ ಮನವಿ ಮಾಡಲಿದ್ದೇನೆ ಎಂದು ವಿವರಿಸಿದ್ದಾರೆ.