Monday, December 4, 2023
spot_img
- Advertisement -spot_img

ಯಾವುದೇ ವ್ಯಕ್ತಿ, ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ: ತೆಲಂಗಾಣದಲ್ಲಿ ಅಬ್ಬರದ ಭಾಷಣಕ್ಕೆ ಸಚಿವ ಜಮೀರ್ ಸ್ಪಷ್ಟನೆ

ಬೆಂಗಳೂರು: ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಸ್ಥಾನಮಾನವನ್ನು ಮಾತ್ರ ಹೇಳಿದ್ದೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್(ಟ್ವಿಟ್ಟರ್)ನಲ್ಲಿ ಬರೆದುಕೊಡಿರುವ ಸಚಿವ ಜಮೀರ್ ಅಹಮ್ಮದ್, ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರು ಖಾದರ್ ಮುಂದೆ ಕೈಮುಗಿದು ನಿಲ್ತಾರೆ; ಈ ತಾಕತ್ತಿರೋದು ಕಾಂಗ್ರೆಸ್’ಗೆ ಮಾತ್ರ: ಸಚಿವ ಜಮೀರ್

ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಸಚಿವ ಜಮೀರ್ ಪ್ರಶ್ನಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles