ಮಂಡ್ಯ : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಾಣೆಯಾಗಿದ್ದಾರೆ ಎಂದು ಬ್ಯಾನರ್‌ವೊಂದನ್ನು ಪೊಲೀಸ್ ಬ್ಯಾರಿಕೇಡ್‌ಗೆ ನೇತು ಹಾಕಲಾಗಿದ್ದು, ಅದರಲ್ಲಿ ಸಚಿವ ಗೋಪಾಲಯ್ಯ ಕಾಣೆಯಾಗಿದ್ದಾರೆ ಎಂದು ಫೋಟೊ ಹಾಕಿ ಆಕ್ರೋಶ ಹೊರಹಾಕಲಾಗಿದೆ.
ಮಂಡ್ಯದಲ್ಲಿ ಇಂತಹ ಬ್ಯಾನರ್ ಕಾಣಿಸುತ್ತಿದ್ದು, ರೈತ ಸಂಘದವರು ಉಸ್ತುವಾರಿ ಸಚಿವರನ್ನು ಹುಡುಕಿಕೊಡುವಂತೆ ಮನವಿ ಮಾಡುತ್ತಿದ್ದಾರೆ. ತಮ್ಮ ಬೇಡಿಕೆಗೆ ಸಚಿವರು ಸ್ಪಂದಿಸುತ್ತಿಲ್ಲ ಎಂಬುದು ರೈತ ಸಂಘದ ಆರೋಪವಾಗಿದ್ದು, ಈ ಸಂಬಂಧ ಪ್ರತಿಭಟನಾ ಸ್ಥಳದಲ್ಲಿ ಬ್ಯಾನರ್‌ವೊಂದನ್ನು ಪೊಲೀಸ್ ಬ್ಯಾರಿಕೇಡ್‌ಗೆ ನೇತು ಹಾಕಲಾಗಿದೆ. ಕಬ್ಬು ಮತ್ತು ಹಾಲಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಬೇಕು.
ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ರೈತರು ಒತ್ತಾಯಿಸಿದ್ದರು. ಈ ಹಿನ್ನೆಲೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ ೧೭ ದಿನಗಳಿಂದ ರೈತರು ಅಹೋರಾತ್ರಿ ಧರಣಿಯನ್ನು ಕೈಗೊಂಡಿದ್ದಾರೆ.
ಆದರೆ, ಇದುವರೆಗೂ ಸಚಿವ ಗೋಪಾಲಯ್ಯ ಅವರು ಬಂದು ವಿಚಾರಿಸಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತ ಸಂಘಟನೆಯವರು ಮಂಡ್ಯ ಬಂದ್ ಮಾಡಲು ಚಿಂತನೆ ನಡೆಸಿದೆ.