ಉಡುಪಿ: ಜಿಲ್ಲೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಕುಟುಂಬಸ್ಥರನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇದೊಂದು ದಿಗ್ಬ್ರಮೆ ಮೂಡಿಸುವ ಘಟನೆಯಾಗಿದೆ. ನಾಗರಿಕ ಲೋಕವನ್ನೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ಆರೋಪಿ ದುಷ್ಕೃತ್ಯವೆಸಗಿದ್ದಾನೆ. ಒಂದೇ ಕುಟುಂಬದ ನಾಲ್ಕ ಸದಸ್ಯರನ್ನು ಅಮಾನುಷವಾಗಿ ಕೊಂದು, ರಾಕ್ಷಸ ಪ್ರವೃತ್ತಿ ಮೆರೆದಿದ್ದಾನೆ ಎಂದು ಘಟನೆಯನ್ನು ಖಂಡಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ
ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗನೇ ಕುಟುಂಬಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ. ಉಡುಪಿ ಜಿಲ್ಲೆ, ಶಾಂತಿ ಪ್ರೀಯ ಜಿಲ್ಲೆ. ಇಂತಹ ಜಿಲ್ಲೆಯಲ್ಲಿ ಹೀಗಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಆರೋಪಿ ಬೆಳಗಾವಿಯಲ್ಲಿರುವ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ, ಆತನು ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. 20 ನಿಮಿಷದಲ್ಲಿ ಕೃತ್ಯ ಎಸಗಿರುವ ಅವನು ಮಾನಸಿಕ ಸ್ಥಿತಿ ಯಾವ ರೀತಿ ಇರಬಹುದು ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಕುಟುಂಬಸ್ಥರು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ಮೂಲಕ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದಾರೆ. ಮನೆಯವರು ಒಬ್ಬರ ಹೆಸರನ್ನು ಸೂಚಿಸಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ. ನಾನು ಬೆಳಗಾವಿಯಲ್ಲಿ ಇದ್ದ ಕಾರಣಕ್ಕೆ ಬರುವುದಕ್ಕೆ ಲೇಟ್ ಆಗಿದೆ. ಆದರೆ ಅಲ್ಲಿಂದಲೇ ನಾನು ಕುಟುಂಬದ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿಇದ್ದೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.