ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವೀ ಮಹಿಳಾ ರಾಜಕಾರಣಿ, ಸಾಮಾನ್ಯ ಕಾರ್ಯಕರ್ತೆಯಿಂದ ಮಂತ್ರಿಗಿರಿಯವರೆಗೂ ತಮ್ಮ ಪಾರುಪತ್ಯ ಸ್ಥಾಪಿಸಿರುವ ‘ಕುಂದಾನಗರಿ’ಯ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇವರು ಸತತ ಎರಡನೇ ಬಾರಿಗೆ ಆಯ್ಕೆಯಾಗಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. ಜಿಲ್ಲೆಯಲ್ಲಿ ನಿಷ್ಠಾವಂತ ಕಾರ್ಯಕರ್ತೆಯಂತೆ ಸದಾಕಾಲ ಗುರುತಿಸಿಕೊಳ್ಳುವ ಇವರು ಕಾಂಗ್ರೆಸ್ ಪಕ್ಷದ ಬದ್ದತೆಯನ್ನು ಮೆರೆಯುವುದರಲ್ಲಿ ಹಿಂದಿಲ್ಲ.
ಲಕ್ಷ್ಮೀ ಹೆಬ್ಬಾಳ್ಕರ್ ಬಾಲ್ಯ ಹಾಗೂ ಜೀವನ..
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಟ್ಟಿಹೊಳಿ ಗ್ರಾಮದಲ್ಲಿ ಬಸವರಾಜ ಹಾಗೂ ಗಿರಿಜಾ ದಂಪತಿಗಳ ಮಗಳಾಗಿ 1975ರಲ್ಲಿ 28ರಂದು ಜನಿಸುತ್ತಾರೆ. ರಾಜ್ಯಶಾಸ್ತ್ರದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಾರೆ. ಬಾಲ್ಯದ ದಿನಗಳಲ್ಲಿಂದಲೇ ಇವರು ಮಾತಿನ ಕಲೆಗೆ ಒತ್ತುಕೊಟ್ಟು ಕಾಲೇಜು ದಿನಗಳಲ್ಲಿ ಒಳ್ಳೇಯ ವಾಗ್ಮಿಯಾಗಿ ಹೊರಹೊಮ್ಮುವ ಮೂಲಕ ರವೀಂದ್ರ ಹೆಬ್ಬಾಳ್ಕರ್ ಅವರನ್ನು ವಿವಾಹವಾಗುತ್ತಾರೆ.
ಇವರಿಗೆ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಓರ್ವ ಪುತ್ರನಿದ್ದಾನೆ. ಉಳಿದಂತೆ ಇವರ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಕುಟುಂಬ ವರ್ಗವೂ ಇದೆ.
ಕುಟುಂಬದ ಹಿನ್ನೆಲೆಯೂ ಪ್ರಭಾವ ಹೊಂದಿದ್ದ ಕಾರಣಕ್ಕೆ ಇವರು ರಾಜಕೀಯವಾಗಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಆರಂಭದ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದ ಇವರು ಹಂತ ಹಂತವಾಗಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆಯಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಬಳಿಕ ಮೊದಲ ಬಾರಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಪರಿಣಾಮ 2015ರಲ್ಲಿ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಯ್ಕೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆಗೊಳಿಸಲು ಶ್ರಮಿಸಿದ್ದರು.
2013ರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಿದ್ದ ಇವರು ಸಮಯದಲ್ಲಿ ಸೋಲುಣಬೇಕಾಯಿತು.
ಅದಾದ ಬಳಿಕ 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿದು, ಆ ಸಂದರ್ಭದಲ್ಲಿ 35,811 ಮತಗಳನ್ನು ಪಡೆದರೂ ಹೆಬ್ಬಾಳ್ಕರ್ ಅವರಿಗೆ ವಿಜಯ ಲಕ್ಷ್ಮೀ ಒಲಿದಿರಲಿಲ್ಲ. ಅದರೆ ಗಟ್ಟಿಗಿತ್ತಿಯಾಗಿರುವ ಇವರು ಸೋಲಿನಿಂದ ದೃತಿಗೆಡದೆ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದುಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಲ್ಲದೆ ಅವರ ನೋವು-ನಲಿವುಗಳಲ್ಲಿ ಭಾಗಿಯಾಗುವ ಮೂಲಕ ಜನರ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗುತ್ತಾರೆ.
ಆ ವೇಳೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿರದಿದ್ದರೂ ಸಹ ಅವರು ಒಬ್ಬ ಶಾಸಕರನ್ನು ಮೀರಿಸುವಷ್ಟು ಅನುದಾನವನ್ನು ತಂದು ಗ್ರಾಮೀಣ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿ ಜನರಿಗೆ ಇನ್ನಷ್ಟು ಹತ್ತಿರವಾಗಿದ್ದರು.
2013 ರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು ಇವರು, ಬಳಿಕ 2014 ರ ಲೋಕಸಭಾ ಚುನಾವಣೆಯಲ್ಲೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಯ ಹೊಂದಿದ್ದರು. ಸೋಲುಗಳಿಂದ ಧೃತಿಗೆಡದ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮುಂದುವರೆಸಿದರು. ಶಾಸಕಿಯಲ್ಲದಿದ್ದರೂ ಓರ್ವ ಶಾಸಕರು ಮಾಡಿದ್ದಕ್ಕಿಂತ ಹೆಚ್ಚಿನ ಅಭಿವೃದ್ದಿಯ ಕಾರ್ಯಗಳನ್ನು ಕೈಗೊಂಡಿದ್ದರು.
ಕಾರ್ಯಕತೆ ಹೆಬ್ಬಾಳ್ಕರ್ ಶಾಸಕಿ, ಸಚಿವೆಯಾದದ್ದು ಇತಿಹಾಸ…
ಕಳೆದ 2018ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ102,040 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಫರ್ಧಿ ಬಿಜೆಪಿ ಅಭ್ಯರ್ಥಿಯನ್ನು 51,680 ಮತಗಳ ಅಂತರದಿಂದ ಸೋಲಿಸುವ ಮೂಲಕ ಆ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅತೀ ಹೆಚ್ಚು ಮತಗಳ ಅಂತರದ ಜಯ ಸಾಧಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಬಳಿಕ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮೈಸೂರು ಮಿನರಲ್ಸ್ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸಿದ್ದಾರೆ.
2019 ರಲ್ಲಿ 17 ಕಾಂಗ್ರೆಸ್ ಶಾಸಕರು ಪಕ್ಷವನ್ನು ತೊರೆದು ಬಿಜೆಪಿ ಸೇರಿ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ಪತನಗೊಂಡ ಬಳಿಕ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿತ್ತು. ಆ ವೇಳೆಯಲ್ಲಿಯೂ ವಿಪಕ್ಷದಲ್ಲಿದ್ದರೂ ಸಹ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕ್ಷೇತ್ರದ ಜನರ ಮೇಲಿನ ಕಾಳಜಿಯ ಜೊತೆಗೆ ಕಾರ್ಯಕ್ಷಮತೆಯನ್ನು ಮೆರೆದಿದ್ದರು.
ಕ್ಷೇತ್ರದ ಜನರ ಮೇಲಿನ ಕಾಳಜಿ ಹಾಗೂ ಇವರ ಛಲ ಮತ್ತು ಪಕ್ಷ ನಿಷ್ಠೆಗೆ 1.8 ಲಕ್ಷ ಮತಗಳನ್ನು ಪಡೆಯುವ ಮೂಲಕ ಪ್ರಸ್ತುತ 2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುನಃ ಎರಡನೇ ಬಾರಿಗೆ ಶಾಸಕಿಯಾಗಿದ್ದಲ್ಲದೆ ಬಿಜೆಪಿಯ ಅಭ್ಯರ್ಥಿಯನ್ನು56 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಪರಾಭವಗೊಳಿಸುವ ಮುಖೇನ ಇನ್ನೊಂದು ಬಾರಿ ಹೆಬ್ಬಾಳ್ಕರ್ ಗೆದ್ದು ಬೀಗಿದ್ದಾರೆ.
ಇದೇ ಅವಧಿಯಲ್ಲಿ ಇವರ ಸಂಘಟನಾ ಸಾಮರ್ಥ್ಯ ಹಾಗೂ ಜನ ಸಾಮಾನ್ಯರೊಂದಿಗಿನ ಒಡನಾಟವನ್ನು ಗಮನಿಸಿರುವ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯನ್ನಾಗಿ ನೇಮಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ತರ ಜವಾಬ್ದಾರಿಯನ್ನು ನೀಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.