ಗದಗ : ಬೈಕ್ ಸ್ಕಿಡ್ ಆಗಿ ರಸ್ತೆಯ ಮಧ್ಯೆ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸಚಿವ ಎಂ.ಬಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಬೈಕ್‌ನಿಂದ ಬಿದ್ದಿದ್ದ ವ್ಯಕ್ತಿಯನ್ನು ಸಹಾಯಕರ ಜೊತೆಯಾಗಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : ‘ಸಿಟಿ ರವಿಗೆ ಮರಿಯಾದೆ ಕೊಟ್ಟು ಮನೆಗೆ ಕಳುಹಿಸಿದ್ದಾರೆ’
ಎಂ.ಬಿ.ಪಾಟೀಲ್ ಅವರು ಗದಗನಿಂದ ಮುಂಡರಗಿಯತ್ತ ಹೊರಟಿದ್ದಾಗ ಮಾರ್ಗಮಧ್ಯೆ ಹೈತಾಪುರ ಬಳಿ ಬಿದ್ದಿದ್ದ ವ್ಯಕ್ತಿಯನ್ನು ಗಮನಿಸಿ, ಕಾರು ನಿಲ್ಲಿಸಿ ಅವರ ಅಪಘಾತಕ್ಕೊಳಗಾದವರ ನೆರವಿಗೆ ಧಾವಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿಸಿ, ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ. ಸಚಿವರ ಮಾನವೀಯ ನಡೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.