Friday, September 29, 2023
spot_img
- Advertisement -spot_img

‘ಸಿಟಿ ರವಿಗೆ ಮರ್ಯಾದೆ ಕೊಟ್ಟು ಮನೆಗೆ ಕಳುಹಿಸಿದ್ದಾರೆ’

ಗದಗ : ನಮ್ಮ ಪಕ್ಷಕ್ಕೆ ಯಾರು ಬರುತ್ತಾರೆ ಎಂಬುವುದು ನನಗೆ ಗೊತ್ತಿಲ್ಲ. ಅಂತಿಮವಾಗಿ ಯಾರನ್ನು ಸೇರ್ಪಡಿಸಿಕೊಳ್ಳಬೇಕೆಂಬುವುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ನಮ್ಮ ಪಕ್ಷ ಕಣ್ಣು ಮುಚ್ಚಿ ಎಲ್ಲರನ್ನೂ ಸೇರಿಸಿಕೊಳ್ಳುವುದಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ಆಯ್ಕೆಮಾಡಿ, ಕಾರ್ಯಕರ್ತರ ಒಪ್ಪಿಗೆಯ ಬಳಿಕ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ : ‘ರಾಜ್ಯದ ಶಿಕ್ಷಣ ನೀತಿಯನ್ನು ಕೇಂದ್ರ ನಿಯಂತ್ರಿಸುವುದು ಸರಿಯಲ್ಲ’

ಮರಿಯಾದೆ ಇದ್ದವರು ಯಾರು ಕಾಂಗ್ರೆಸ್ ಗೆ ಹೋಗುದಿಲ್ಲ ಎಂಬ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮರಿಯಾದೆ ಬಹಳ ಇದೆ ಎಂದು ಹೇಳಿ, ಅದೇ ಮರಿಯಾದೆ ಕೊಟ್ಟು ಸಿಟಿ ರವಿ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

40% ಸರ್ಕಾರ ಎಂದು ಹೇಳಿ ಜಾಸ್ತಿ ಮರಿಯಾದೆ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಗೆ 136 ಸ್ಥಾನ ನೀಡಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಸಂಪುಟದಲ್ಲಿ ಹೊಸಬರಿಗೆ ಆಧ್ಯತೆ ನೀಡುವ ಬಗ್ಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪರ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು, ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷ ಮುನಿಯಪ್ಪ ಅವರ ಕೈಯಲ್ಲಿ ಇಲ್ಲ ಹೈಕಮಾಂಡ್ ಕೈಯಲ್ಲಿದೆ ಎಂದು ಸೂಚ್ಯವಾಗಿ ಹೇಳಿದರು.

ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ..

ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ, ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅವರಿಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಆಗಿಲ್ಲ, ವಿಪಕ್ಷ ನಾಯಕನೇ ಇಲ್ಲದೆ ಅಧಿವೇಶನವಾಗಿದೆ ಎಂದು ಕಿಡಿ ಕಾರಿದ್ದಾರೆ.

ಅವರ ಪಕ್ಷದಲ್ಲಿ ಹತಾಶರಾಗಿ ಪಕ್ಷವನ್ನು ತೊರೆಯುವ ಹಂತದಲ್ಲಿ ಬಹಳಷ್ಟು ಜನರು ಇದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದ್ದಾರೆ. ಹಿಜಾಬ್, ಹಲಾಲ್ ಹಾಗೂ ಧರ್ಮ-ಜಾತಿಗಳ ನಡುವಿನ ಭಾವನಾತ್ಮಕ ಸಂಬಂಧಗಳನ್ನು ಕೆರಳಿಸುವಂತ ಕೆಲಸ ಮಾಡುತ್ತಾರೆ ಎಂದು ಎಂ ಬಿ ಪಾಟೀಲ್ ಹರಿಹಾಯ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles