ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅವರ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೇ? ಅಥವಾ ಅವರ ಆರೋಗ್ಯದಲ್ಲಿ ಏರುಪೇರಾಗಿದೆಯೇ? ಎಂಬ ಮಾಹಿತಿ ಕೂಡ ಇನ್ನೂ ದೊರಕಿಲ್ಲ , ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ನಿರೀಕ್ಷಿಸಲಾಗಿದೆ.