ಬೆಂಗಳೂರು: ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ ಎಂದು ಮೋದಿ ಬೆಂಗಳೂರಿಗೆ ಆಗಮಿಸಿದಾಗ ಬ್ಯಾರಿಕೇಡ್ ಹಿಂದೆ ನಿಂತು ಕೈ ಬೀಸುತ್ತಿದ್ದ ಬಿಜೆಪಿಗರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ‘ರಾಜಕೀಯವಾಗಿ, ಸೈದ್ಧಾಂತಿಕವಾಗಿ ವಿರೋಧಿಗಳಾಗಿದ್ದರೂ
ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಆರ್. ಅಶೋಕ್‌ಗೆ ಬುದ್ದಿ ಭ್ರಮಣೆ ಆಗಿರಬೇಕು; ಡಿ.ಕೆ. ಶಿವಕುಮಾರ್‌ಗೆ ವಾಗ್ದಾಳಿ!
‘ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ “ವಿರೋಧ ಪಕ್ಷದ ನಾಯಕ”ನ ಆಯ್ಕೆ ಸಾಧ್ಯವಾಗುವುದೇ? “ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ” ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ’ ಎಂದಿದ್ದಾರೆ.
ಇದನ್ನೂ ಓದಿ: ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ರೆ ಬಿಜೆಪಿಗೆ ರಾಜೀನಾಮೆ ನೀಡ್ತಾರಾ ಹೆಬ್ಬಾರ್?
ಚಂದ್ರಯಾನ-3 ಯೋಜನೆಯ ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಹೆಚ್‌ಎಎಲ್‌ನಿಂದ ಇಸ್ರೋ ಕಚೇರಿಗೆ ರಸ್ತೆ ಮಾರ್ಗದ ಮೂಲಕ ತೆರಳಿದರು. ಈ ವೇಳೆ ರಸ್ತೆಯುದ್ದಕ್ಕೂ ಜನ ನಿಂತು ಘೋಷಣೆ ಕೂಗಿದ್ರು. ಆದ್ರೆ ಜನರ ಮಧ್ಯೆ ನಿಂತ ಬಿಜೆಪಿ ನಾಯಕರು ಮೋದಿ ಕಡೆ ಕೈ ಮಾಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದು, ಈ ಫೋಟೋ ಬಳಸಿ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಇದಕ್ಕೂ ಮೊದಲು ಕಾಂಗ್ರೆಸ್ ಸಹ ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಕಾಲೆಳೆದಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.