ತುಮಕೂರು: ಪ್ರಧಾನಿ ನರೇಂದ್ರ ಮೋದಿ ಪ್ರತಿ 15 ದಿನಕ್ಕೊಮ್ಮೆ ಕರ್ನಾಟಕಕ್ಕೆ ಬರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರ ಜತೆಗೆ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿ ತಿಂಗಳು ನಾಲ್ಕು ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು. ಮುಂದಿನ ಚುನಾವಣೆ ದೃಷ್ಟಿಯಲ್ಲಿಕೊಂಡು ಕರ್ನಾಟಕಕ್ಕೆ ಬರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದಲಿತ ಸಿಎಂ ವಿಚಾರದ ಕುರಿತೂ ಪ್ರತಿಕ್ರಿಯಿಸಿ, ಇದನ್ನು ಪಕ್ಷದ ವರಿಷ್ಠರೇ ತೀರ್ಮಾನಿಸುತ್ತಾರೆ. ಕರ್ನಾಟಕದಲ್ಲಿ ಎಲ್ಲಾ ಜಾತಿ, ಸಮುದಾಯದವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಯಾರೂ ದಲಿತ ಸಿಎಂ ಆಗಬೇಕು ಅಂತ ನಮ್ಮಲ್ಲಿ ಬೇಡಿಕೆ ಇಟ್ಟಿಲ್ಲ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಇದೇ ತಿಂಗಳು ಕೇಂದ್ರದ ನಾಯಕರೆಲ್ಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿನ ಮಾನದಂಡಗಳು ಏನು, ಚುನಾವಣೆ ಎದುರಿಸಲು ಏನೇನು ಮಾಡಬೇಕು ಎಂಬುದನ್ನು ಮೋದಿ, ಶಾ ಅವರು ತೀರ್ಮಾನಿಸುತ್ತಾರೆ ಎಂದರು.
ರೆಡ್ಡಿ ಹೊಸ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ, ಅವೆಲ್ಲ ಶುದ್ಧ ಸುಳ್ಳು ಎಂದು ಹೇಳಿದ್ದಾರೆ. ರೆಡ್ಡಿ ಅವರು ಹೊಸ ಪಕ್ಷ ಕಟ್ಟಿಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂಬ ಊಹಾಪೋಹಗಳಿಗೆ ಸಂಬಂಧಿಸಿ ಮಾತನಾಡಿ, ಈ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ, ನಾನು ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾತನಾಡಿದ್ದೇವೆ. ರೆಡ್ಡಿ ಹೊಸ ಪಕ್ಷ ಕಟ್ಟುವುದೆಲ್ಲ ಶುದ್ಧ ಸುಳ್ಳು. ಹಿಂದೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮುಂದೆಯೂ ಬೆಂಬಲ ನೀಡುತ್ತಾರೆ ಎಂದು ಹೇಳಿದರು.