ಬೆಳಗಾವಿ: ಬಿಜೆಪಿಯವರು ₹10ಗೆ ಸಿಗುವ ವಸ್ತುವಿಗೆ 100 ರೂಪಾಯಿ ನೀಡಿ ಖರೀದಿ ಮಾಡಿದ್ದಾರೆ. ಇದರ ಬಗ್ಗೆ ತನಿಖೆ ಮಾಡುವುದು ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆಯೂ ಆರೋಪಿಸಿದ್ದೆವು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಲೇಬೇಕು. ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಆರೋಪ ಮಾಡಿದವರೇ ನಾವು. ಈಗ ನಮ್ಮ ಬಳಿಯೇ ಅಧಿಕಾರವಿದೆ. ಹಾಗಾಗಿ ಅಕ್ರಮಗಳ ತನಿಖೆಯನ್ನು ಮುಂದಿನ ಹಂತಕ್ಕೆ ಕರೆದೊಯ್ಯವುದು ನಮ್ಮ ಜವಾಬ್ದಾರಿ’ ಎಂದರು.
‘ಕೋವಿಡ್ ವೇಳೆಯಲ್ಲಿ ₹10 ಮೌಲ್ಯದ ವಸ್ತುವನ್ನು ₹100ಕ್ಕೆ, ₹100 ವಸ್ತುವನ್ನು ₹1 ಸಾವಿರಕ್ಕೆ ಖರೀದಿಸಿ ಭಾರಿ ಅವ್ಯವಹಾರ ಮಾಡಿದ್ದಾರೆ. ಈ ಹಗರಣದಲ್ಲಿ ಆ ಕಾಲದ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೂ ಭಾಗಿಯಾಗಿರುತ್ತಾರೆ. ಸಮಗ್ರ ತನಿಖೆಯಿಂದ ಸತ್ಯ ಹೊರಬರಲಿದೆ’ ಎಂದರು.
ಮಾಜಿ ಆರೋಗ್ಯ ಸಚಿವ ಕೆ.ಸುಧಾಕರ್ ಕಾಂಗ್ರೆಸ್‌ಗೆ ಬಂದರೂ ತನಿಖೆಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ‘ಯಾರೇ ಕಾಂಗ್ರೆಸ್‌ಗೆ ಬಂದರೂ, ಬಾರದಿದ್ದರೂ ತನಿಖೆ ಆಗಲೇಬೇಕು. ಒಬ್ಬರಷ್ಟೇ ಅಲ್ಲ, ಬಹಳ ಜನರ ಮೇಲೆ ಆರೋಪವಿದ್ದು, ಆ ಬಗ್ಗೆ ತನಿಖೆ ಆಗಬೇಕಿದೆ ಎಂದರು.
ಇದನ್ನೂ ಓದಿ: ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ
ಕೋವಿಡ್ ಹೆಸರಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕುರಿತು ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ನಿನ್ನೆಯಷ್ಟೇ ಅಧಿಸೂಚನೆ ಹೊರಡಿಸಿದೆ.
ಈ ಎರಡು ಇಲಾಖೆಗಳು ಕೋವಿಡ್ ನಿಯಂತ್ರಣಕ್ಕಾಗಿ ಔಷಧ ಹಾಗೂ ಉಪಕರಣಗಳನ್ನು ಖರೀದಿಸಿರುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ವಿವರಿಸಲಾಗಿದೆ. ಹೀಗಾಗಿ, ಈ ಪ್ರಕರಣವನ್ನು ತನಿಖೆ ನಡೆಸಲು ಆಯೋಗ ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.