Sunday, October 1, 2023
spot_img
- Advertisement -spot_img

ಡಾ.ಎಂ.ಎಂ ಕಲಬುರ್ಗಿ ಮನೆಗೆ ಸಚಿವ ಶಿವರಾಜ ತಂಗಡಗಿ ಭೇಟಿ

ಧಾರವಾಡ : ದುಷ್ಕರ್ಮಿಗಳಿಂದ ಹತ್ಯೆಯಾದ ಸಂಶೋಧಕ ದಿ. ಡಾ.ಎಂ.ಎಂ ಕಲಬುರ್ಗಿ ಅವರ ಮನೆಗೆ ಇಂದು ಸಚಿವ ಶಿವರಾಜ ತಂಗಡಗಿ ಸೌಹಾರ್ದಯುತ ಭೇಟಿ ನೀಡಿದರು.

ಕಲ್ಯಾಣನಗರದ ಕಲಬುರ್ಗಿ ಅವರ ನಿವಾಸಕ್ಕೆ ಆಗಮಿಸಿದ ಶಿವರಾಜ ತಂಗಡಗಿ, ಕಲ್ಬುರ್ಗಿಯವರ ಪತ್ನಿ ಉಮಾದೇವಿ ಹಾಗೂ ಕುಟುಂಬ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ ಈ ಹಿರೇಮಠ ಹಾಗೂ ಹಿರಿಯ ವಿದ್ವಾಂಸ ಡಾ.ವೀರಣ್ಣ ರಾಜೂರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 30, 2015ರಂದು ಮುಸುಕುಧಾರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಎಂ.ಎಂ.ಕಲಬುರ್ಗಿ ಸಾವನ್ನಪ್ಪಿದರು. ಧಾರವಾಡದಲ್ಲಿನ ಅವರ ಮನೆಗೆ ನುಗ್ಗಿದ ಅಪರಿಚಿತ ದಾಳಿಕೋರರು ಹಾರಿಸಿದ ಎರಡು ಸುತ್ತು ಗುಂಡುಗಳು ಹಣೆ ಮತ್ತು ಎದೆಗೆ ತಗುಲಿದ್ದವು. ಕಲಬುರ್ಗಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles